ದೇಶ

ಕೊರೋನಾ ಅಂಕಿ ಅಂಶ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

Lingaraj Badiger

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೊವಿಡ್ -19 ಪ್ರಕರಣಗಳ ಕುರಿತು ನೈಜ ಮಾಹಿತಿಯನ್ನು ಹೊರಹಾಕುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ದಿಲೀಪ್ ಘೋಷ್ ನೇತೃತ್ವದ ನಿಯೋಗ ರಾಜ್ಯಪಾಲ ಜಗದೀಪ್ ಧಾನ್ಕರ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಸರ್ಕಾರ ಕೊರೋನಾ ಸೋಂಕಿನ ಪ್ರಕರಣಗಳ ನೈಜ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ನಿಯೋಗ ಆರೋಪಿಸಿದೆ. 

ಜನರು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ನೀಡುತ್ತಿರುವ ಅಂಕಿಅಂಶಗಳಲ್ಲಿ ನಂಬಿಕೆಯಿರಿಸಿಲ್ಲ.  ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ನಿಯೋಗ ಕೋರಿದೆ.

ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ ಏ. 10ರಂದು ಪಶ್ಚಿಮ ಬಂಗಾಳದಲ್ಲಿ 116 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ರಾಜ್ಯ ಸರ್ಕಾರ ಮಾತ್ರ ಕೇವಲ 95 ಪ್ರಕರಣಗಳ ಮಾಹಿತಿ ನೀಡಿತ್ತು ಎಂದು ಬಿಜೆಪಿ ದೂರಿದೆ.

SCROLL FOR NEXT