ಸಂಗ್ರಹ ಚಿತ್ರ 
ದೇಶ

ತಂಬಾಕು ಜಿಗಿದು ಎಲ್ಲೆಂದರಲ್ಲಿ ಉಗುಳಿದರೆ ಕೊರೋನಾ ಹೆಚ್ಚಾಗುತ್ತೆ: ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ!

ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದನ್ನು ತಡೆಯಬೇಕು. ಇಂತಹ ಕ್ರಮಗಳಿಂದಲೂ ಸಹ ಸೋಂಕು ಹೆಚ್ಚಾಗಲಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೇಂದ್ರ ಆರೋಗ್ಯ ಸಚಿವಾಲು ಸೂಚಿಸಿದೆ.

ಬೆಂಗಳೂರು: ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದನ್ನು ತಡೆಯಬೇಕು. ಇಂತಹ ಕ್ರಮಗಳಿಂದಲೂ ಸಹ ಸೋಂಕು ಹೆಚ್ಚಾಗಲಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೇಂದ್ರ ಆರೋಗ್ಯ ಸಚಿವಾಲು ಸೂಚಿಸಿದೆ.

ಈ ಸಂಬಂಧ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಜತೆಗೆ ಹೊಗೆರಹಿತ ತಂಬಾಕು ಬಳಕೆಯನ್ನೂ ಸಹ ನಿರ್ಬಂಧಿಸಬೇಕು ಎಂದು ಹೇಳಿದೆ. ತಂಬಾಕು ಉತ್ಪನ್ನಗಳು, ಪಾನ್ ಮಸಾಲ ಮತ್ತು ಸುಪಾರಿ ಜಗಿಯುವುದರಿಂದ ಜೊಲ್ಲುರಸದ ಉತ್ಪಾದನೆ ಹೆಚ್ಚಾಗುತ್ತದೆ. ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸೋಂಕು ಉಳ್ಳವರಿದ್ದರೆ ಅದು ಒಬ್ಬರಿಂದ ಒಬ್ಬರಿಗ ಹರಡುತ್ತದೆ ಎಂದು ಹೇಳಿದೆ.

ಕೊರೋನಾ ವೈರಾಣು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಸೂಚಿಸಲಾಗಿದೆ.

ಸರ್ಕಾರದ ಸೂಚನೆಯನ್ನು ಉಲ್ಲಂಘನೆ ಮಾಡುವವರ ಮೇಲೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು "ಸಾಂಕ್ರಾಮಿಕ ರೋಗಗಳ ನಿರ್ವಹಣೆ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ-೧೮೬೦ ಮತ್ತು ಅಪರಾಧ ನಿಯಂತ್ರಣ ಸಂಹಿತೆಯಡಿ ಕ್ರಮ ತೆಗೆದುಕೊಳ್ಳುವ ಕುರಿತು ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ.

ಈಗಾಗಲೇ ೯ಕ್ಕೂ ಹೆಚ್ಚು ರಾಜ್ಯಗಳು ಈಗಾಗಲೇ ತಂಬಾಕು ಬಳಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸುವ ಆದೇಶ ಹೊರಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!