ದೇಶ

ಧಾರಾವಿಯಲ್ಲಿ ಮತ್ತೆ 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1574ಕ್ಕೆ ಏರಿಕೆ

Srinivasamurthy VN

ಮುಂಬೈ: ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಧಾರಾವಿ ಸ್ಲಂ ನಲ್ಲಿ ಮತ್ತೆ 15 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,574ಕ್ಕೆ ಏರಿಕೆಯಾಗಿದೆ.

ಆ ಮೂಲಕ ಧಾರಾವಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಪೈಕಿ ಈ ವರೆಗೂ 127 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಬಿಗಿ ಗೊಳಿಸಲಾಗಿದ್ದು,  ರಸ್ತೆಗಳಿಗೆಲ್ಲಾ ಬ್ಯಾರಿಕೇಡ್ ಹಾಕಿರುವ ಪೊಲೀಸರು, ಅನಾವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿರುವವರ ವಿರುದ್ಧ ಪ್ರಕಕರಣ ದಾಖಲಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈ ವರೆಗೂ ಪೊಲೀಸರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ 35 ಸಾವಿರಕ್ಕೂ ಅಧಿಕ ಕೇಸ್ ಗಳನ್ನು  ದಾಖಲಿಸಿದ್ದು, ಈ ಪೈಕಿ ಪೊಲೀಸರ ಮೇಲೆ ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ 70 ಪ್ರಕರಣಗಳು ದಾಖಲಾಗಿವೆ. 

ಅಂತೆಯೇ 161 ಮಂದಿಯನ್ನು ಪೊಲೀಸರು ಬಂಧಿಸಿದ್ದು, 475 ಮಂದಿಯ ವಿರುದ್ಧ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪೊಲೀಸರು 2,525 ಮಂದಿಯನ್ನು ಬಂಧಿಸಿದ್ದಾರೆ, 

SCROLL FOR NEXT