ದೇಶ

ಕೊರೋನಾ ವೈರಸ್ ಸೋಂಕು ತಗುಲಿದ್ದ ತಬ್ಲಿಘಿ ಆತ್ಮಹತ್ಯೆಗೆ ಶರಣು! 

Srinivas Rao BV

ತಬ್ಲಿಘಿ ಜಮಾತ್ ನ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ, ಕೊರೋನಾ ಸೋಂಕು ದೃಢಪಟ್ಟಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಮಹಾರಾಷ್ಟ್ರದ ಅಕೋಲಾದ ಜಿಲ್ಲಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ನ ನಾಗೌನ್ ಜಿಲ್ಲೆಯ ಮೂಲದ 30 ವರ್ಷದ ವ್ಯಕ್ತಿ ಮಾ.06-8 ವರೆಗೆ ದೆಹಲಿಯಲ್ಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ. ಅಪೂರ್ವ್ ಪಾವ್ಡೇ ಹೇಳಿದ್ದಾರೆ. 

ಏ.07 ರಂದು ಕೊರೋನಾ ವೈರಸ್ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾತ್ ರೂಮ್ ನಲ್ಲಿ ಕೆಳಗೆ ಬಿದ್ದಿದ್ದವನಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾದರೆ ಬೆಳಿಗ್ಗೆ 8 ಗಂಟೆ ವೇಳೆಗೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. 

ಕೊರೋನಾಗೆ ಚಿಕಿತ್ಸೆ ಕೊಡುತ್ತಿರಬೇಕಾದರೆ ಆತ ಒತ್ತಡದಲ್ಲಿದ್ದ, ವೈದ್ಯಕೀಯ ಸಿಬ್ಬಂದಿಗಳು ಆತನಿಗೆ ಆಪ್ತಸಲಹೆ ನೀಡುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. 

ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, "ಇದು ಆತ್ಮಹತ್ಯೆಯ ಪ್ರಕರಣದಂತೆ ತೋರುತ್ತದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆದಿದೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   

ಮಾ.09-7 ವರೆಗೆ ಆತ ಅಕೋಲಾದ ಮದರಸಾದಲ್ಲಿ ತಂಗಿದ್ದ, ಆತನೊಂದಿಗೆ ಸಂಪರ್ಕದಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

SCROLL FOR NEXT