ಭಾರತೀಯ ಸೇನೆ 
ದೇಶ

ಭಾರತೀಯ ಯೋಧರಿಂದ ಭರ್ಜರಿ ಬೇಟೆ: 15 ಪಾಕ್ ಸೈನಿಕರು, 8 ಉಗ್ರರು ಮಟಾಶ್!

ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಕಾಶ್ಮೀರ: ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯ ಯೋಧರು ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು ಈ ವೇಳೆ ಪಾಕಿಸ್ತಾನದ ಸೇನೆ ಹಾಗೂ ಭಯೋತ್ಪಾದಕರು ಸೇರಿ 23 ಮಂದಿ ಹತರಾಗಿದ್ದಾರೆ ಎಂದು ಭದ್ರತಾ ಪಡೆಯ ಅಧಿಕಾರಿಗಳಿಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಭಾರತೀಯ ಸೇನೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಸೇನೆ ಸಹ ಖಚಿತಪಡಿಸಿದೆ. ಈ ದಾಳಿಯಲ್ಲಿ 15 ವರ್ಷದ ಬಾಲಕಿ ಸೇರಿ ನಾಲ್ವರು ಗಾಯಗೊಂಡಿದ್ದಾರೆಂದು ಆರೋಪಿಸಿದೆ. 

ಕೊರೋನಾ ವೈರಸ್ ನಿಂದಾಗಿ ದೇಶ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲೂ ಗಡಿ ನಿಯಂತ್ರಣ ರೇಖೆ ಬಳಿ 160ಕ್ಕೂ ಹೆಚ್ಚು ಭಯೋತ್ಪಾದಕರು ಗಡಿ ನುಸುಳಲು ಕಾದು ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿದಾಳಿ ಭಾರತಕ್ಕೂ ಅನಿರ್ವಾಯವಾಗಿದೆ.

ನಿನ್ನೆ ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ  ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅಪ್ರಾಪ್ತ ಸೇರಿ ಮೂವರು ನಾಗರಿಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು