ನರೇಂದ್ರ ಮೋದಿ 
ದೇಶ

ಲಾಕ್ ಡೌನ್ ವಿಸ್ತರಣೆ ಸಂಬಂಧ ನಿರ್ಧಾರ ಇಂದು: ಎಲ್ಲರ ಚಿತ್ತ ಮೋದಿ ಘೋಷಣೆಯತ್ತ

ಕರೋನಾ ವೈರಸ್ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿದ್ದ 21 ದಿನಗಳ ಲಾಕ್ ಡೌನ್ ಇನ್ನು ಒಂದು ದಿನದಲ್ಲಿ ಕೊನೆಯಾಗಲಿದೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವ ಸಮಯದಲ್ಲಾದರೂ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. 

ನವದೆಹಲಿ: ಕರೋನಾ ವೈರಸ್ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿದ್ದ 21 ದಿನಗಳ ಲಾಕ್ ಡೌನ್ ಇನ್ನು ಒಂದು ದಿನದಲ್ಲಿ ಕೊನೆಯಾಗಲಿದೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವ ಸಮಯದಲ್ಲಾದರೂ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. 

ಶನಿವಾರ ದೇಶದ ಎಲ್ಲ ರಾಜ್ಯಗಳ  ನಡೆದ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಬಹುತೇಕ ರಾಜ್ಯಗಳ ಸಿಎಂ ಗಳು ಲಾಕ್ ಡೌನ್ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.

ಕೊರೋನಾ ಹಾಟ್ ಸ್ಪಾಟ್ ಮತ್ತು ರೆಡ್ ಜೋನ್ ಎಂದು ಗುರುತಿಸಲ್ಪಟ್ಟಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಈಗಾಗಲೇ ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್ ಮತ್ತು ಒಡಿಸ್ಸಾ ರಾಜ್ಯಗಳು ಏಪ್ರಿಲ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿವೆ.

ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ ಭಾನುವಾರ ಸಂಜೆ 5 ರವೇಳೆಗೆ  ದೇಶದಲ್ಲಿ 8,447 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು,  ಅದರಲ್ಲಿ 765 ಮಂದಿ ಗುಣಮುಖವಾಗಿದ್ದಾರೆ,273 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 918 ಕೇಸ್ ಗಳು ದಾಖಲಾಗಿದ್ದು, 34 ಸಾವಿನ ಪ್ರಕರಣಗಳು ವರದಿಯಾಗಿವೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!