ಸ್ಕಾನಿಂಗ್ ಗೆ ಒಳಪಟ್ಟ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

21 ದಿನಗಳ ಲಾಕ್ ಡೌನ್ ನಾಳೆಗೆ ಮುಕ್ತಾಯ: ಕೇಂದ್ರ ಸಚಿವರು, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರು

21 ದಿನಗಳ ಕೋವಿಡ್-19 ಲಾಕ್ ಡೌನ್ ನಾಳೆಗೆ ಮುಕ್ತಾಯವಾಗುತ್ತಿದ್ದು, ಅದಕ್ಕೆ ಒಂದು ದಿನ ಮೊದಲು ಕೇಂದ್ರ ಸಚಿವರು, ಸರ್ಕಾರದ ಇಲಾಖೆಗಳ ಜಂಟಿ ಕಾರ್ಯದರ್ಶಿಗಳು ಮತ್ತು ಉನ್ನತ ರ್ಯಾಂಕ್ ಮಟ್ಟದ ಅಧಿಕಾರಿಗಳು ಸೋಮವಾರದಿಂದ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ನವದೆಹಲಿ: 21 ದಿನಗಳ ಕೋವಿಡ್-19 ಲಾಕ್ ಡೌನ್ ನಾಳೆಗೆ ಮುಕ್ತಾಯವಾಗುತ್ತಿದ್ದು, ಅದಕ್ಕೆ ಒಂದು ದಿನ ಮೊದಲು ಕೇಂದ್ರ ಸಚಿವರು, ಸರ್ಕಾರದ ಪ್ರಮುಖ ಇಲಾಖೆಗಳ ಜಂಟಿ ಕಾರ್ಯದರ್ಶಿಗಳು ಮತ್ತು ಉನ್ನತ ರ್ಯಾಂಕ್ ಮಟ್ಟದ ಅಧಿಕಾರಿಗಳು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಅಗತ್ಯ ಸೇವೆಗಳ ಇಲಾಖೆಗಳ ಸರ್ಕಾರಿ ನೌಕರರು, ಕೇಂದ್ರ ಸಚಿವರುಗಳು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಧಾನ ಮಂತ್ರಿಗಳು ಕಳೆದ ವಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೇಂದ್ರದ ಸಚಿವರುಗಳು, ಅಧಿಕಾರಿಗಳು ಇಂದು ಕಚೇರಿಗೆ ಬಂದಿದ್ದು ಕಂಡುಬಂತು. ಕೇಂದ್ರ ಸರ್ಕಾರದ ಪ್ರತಿ ಸಚಿವಾಲಯದ ಅಗತ್ಯ ಸೇವೆಗಳ ಇಲಾಖೆಗಳ ಮೂರನೇ ಒಂದು ಭಾಗದಷ್ಟು ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಾಕ್ ಡೌನ್ ನ ನಿಯಮಗಳ ಮಿತಿಯ ನಡುವೆ ಇಂದು ಕರ್ತವ್ಯಕ್ಕೆ ಹಾಜರಾಗಿ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬಂತು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಮ್ಮ  ಅಗತ್ಯ ಸಿಬ್ಬಂದಿಯೊಂದಿಗೆ ಸಂಸತ್ತಿನ ಉತ್ತರ ಬ್ಲಾಕ್ ನಲ್ಲಿರುವ ಕಚೇರಿಗೆ ಆಗಮಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಾಗರಿಕ ಸಬಲೀಕರಣ ಸಚಿವ ತಾವರ್ ಚಂದ್ ಗೆಹ್ಲೊಟ್, ಕ್ರೀಡಾ ಸಚಿವ ಕಿರಣ್ ರಿಜಿಜು, ಬುಡಕಟ್ಟು ಇಲಾಖೆ ಸಚಿವ ಅರ್ಜುನ್ ಮುಂಡಾ ಸಹ ಇಂದು ತಮ್ಮ ತಮ್ಮ ಕಚೇರಿಗಳಿಗೆ 19 ದಿನಗಳ ವಿರಾಮದ ಬಳಿಕ ಆಗಮಿಸಿದರು. ಈ ಸಚಿವರುಗಳೆಲ್ಲ ಲಾಕ್ ಡೌನ್ ಘೋಷಣೆಯಾದ ನಂತರ ಇಷ್ಟು ದಿನ ತಮ್ಮ ಕಚೇರಿಗಳಿಂದಲೇ ಕೆಲಸ ಮಾಡುತ್ತಿದ್ದರು.

ಪ್ರಧಾನಿಯವರ ನಿರ್ದೇಶನ ಮೇರೆಗೆ ಎಲ್ಲಾ ಸಚಿವರು ಕೆಲಸ ಆರಂಭಿಸಿದ್ದಾರೆ ಎಂದು ಗೆಹ್ಲೊಟ್ ತಿಳಿಸಿದರು. ಸಂಸತ್ತಿನ ನಾರ್ತ್ ಬ್ಲಾಕ್, ಸೌತ್ ಬ್ಲಾಕ್, ಶಾಸ್ತ್ರಿ ಭವನ್ ಗಳಲ್ಲಿರುವ ತಮ್ಮ ಕಚೇರಿಗಳಿಗೆ ಹೋಗುವ ಮೊದಲು ಸಚಿವರುಗಳು ಮತ್ತು ಸಿಬ್ಬಂದಿ ಥರ್ಮಲ್ ಸ್ಕಾನಿಂಗ್ ಗೊಳಪಟ್ಟಿದ್ದು ಕಂಡುಬಂತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!