ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊವಿಡ್-19: ತಮಿಳುನಾಡಿನಲ್ಲಿ ಲಾಕ್ ಡೌನ್ ಏಪ್ರಿಲ್ 30ರ ವರೆಗೆ ವಿಸ್ತರಣೆ

21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಮುಕ್ತಾಯಗೊಳ್ಳುತ್ತಿದೆ. ಆದರೆ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಲಾಕ್ ಡೌನ್ ಅನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 13 Apr 2020, 4:48 pm

ಚೆನ್ನೈ: 21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಮುಕ್ತಾಯಗೊಳ್ಳುತ್ತಿದೆ. ಆದರೆ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಲಾಕ್ ಡೌನ್ ಅನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗಿದೆ.

ಲಾಕ್ ಡೌನ್ ಅನ್ನು ರಾಜ್ಯಾದ್ಯಂತ ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಸೋಮವಾರ ಘೋಷಿಸಿದ್ದಾರೆ.

ಪಡಿತರ ಕಾರ್ಡ್ ಹೊಂದಿರುವವರಿಗೆ ಅಕ್ಕಿ, ಸಕ್ಕರೆ, ಬೆಳೆ ಮಕ್ತು ಅಡಿಗೆ ಎಣ್ಣೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತಮಿಳುನಾಡು ಸಿಎಂ ತಿಳಿಸಿದ್ದಾರೆ.

Advertisement

Advertisement

ಅಸಂಘಟಿತ ಕಾರ್ಮಿಕರ ಕುಟುಂಬಕ್ಕೆ ತಲಾ 1 ಸಾವಿರ ರೂಪಾಯಿ, ವಲಸೆ ಕಾರ್ಮಿಕರಿಗೆ 15 ಕೆ ಜಿ ಅಕ್ಕಿ, ಒಂದು ಕೆಜೆ ಬೆಳೆ ಮತ್ತು ಒಂದು ಕೆಜಿ. ಅಡಿಗೆ ಎಣ್ಣೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಚೆನ್ನೈನಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೇಕರಿ ತೆರೆಯಲು ಅನುಮತಿ ನೀಡಲಾಗುವುದು. ಅಗತ್ಯ ವಸ್ತುಗಳ ಖರೀದಿ ವೇಳೆ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಸಿಎಂ ಪಳನಿಸ್ವಾಮಿ ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments