ದೇಶ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 31 ಕೋಟಿ ಜನರಿಗೆ 28 ಸಾವಿರ ಕೋಟಿ ರೂ. ವಿತರಣೆ! 

Srinivas Rao BV

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 31 ಕೋಟಿ ಜನರಿಗೆ ಒಟ್ಟು 28 ಸಾವಿರ ಕೋಟಿ ರೂಪಾಯಿ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. 

ಏ.10 ವರೆಗಿನ ಅಂಕಿ-ಅಂಶಗಳ ಪ್ರಕಾರ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಜನತೆಗೆ ಸಹಕರಿಯಾಗಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 31 ಕೋಟಿ ಜನರಿಗೆ ಆರ್ಥಿಕ ನೆರವು ನೀಡಲಾಗಿದೆ.  

ಒಟ್ಟಾರೆ ಮೊತ್ತದ ಹಣದಲ್ಲಿ 13,855 ಕೋಟಿ ರೂಪಾಯಿ ಹಣವನ್ನು 6.93 ಕೋಟಿ ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ನೀಡಲಾಗಿದೆ.ಇನ್ನು ಪ್ರಧಾನಮಂತ್ರಿ ಜನಧನ್ ಯೋಜನೆಯ ವ್ಯಾಪ್ತಿಯಲ್ಲಿ ಬರುವ 19.86 ಕೋಟಿ ಮಹಿಳಾ ಖಾತೆದಾರರಿಗೆ ಸರ್ಕಾರದಿಂದ 9,930 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 2.16 ಕೋಟಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ 3,066 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

SCROLL FOR NEXT