ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊವಿದ್‍-19 ಲಾಕ್‌ಡೌನ್: ರೈಲು, ವಿಮಾನ ಸೇವೆ ಮೇ 3 ರವರೆಗೆ ರದ್ದು

ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಮಂಗಳವಾರ ತನ್ನ ಎಲ್ಲಾ ಸೇವೆಗಳನ್ನು ಮೇ 3 ರವರೆಗೆ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 14 Apr 2020, 1:48 pm

ನವದೆಹಲಿ: ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಮಂಗಳವಾರ ತನ್ನ ಎಲ್ಲಾ ಸೇವೆಗಳನ್ನು ಮೇ 3 ರವರೆಗೆ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಪ್ರೀಮಿಯಂ ರೈಲುಗಳು, ಮೇಲ್/ಎಕ್ಸ್‌ಪ್ರೆಸ್ ರೈಲುಗಳು, ಪ್ರಯಾಣಿಕರ ರೈಲುಗಳು, ಉಪನಗರ ರೈಲುಗಳು, ಕೋಲ್ಕತಾ ಮೆಟ್ರೋ ರೈಲು, ಕೊಂಕಣ ರೈಲ್ವೆ ಇತ್ಯಾದಿಗಳು ಸೇರಿದಂತೆ ಭಾರತೀಯ ರೈಲ್ವೆಯ ಎಲ್ಲಾ ಪ್ರಯಾಣಿಕ ರೈಲು ಸೇವೆಗಳನ್ನು 2020 ರ ಮೇ 3ರ ರಾತ್ರಿ 12 ಗಂಟೆಗಳವರೆಗೆ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ದೇಶದ ವಿವಿಧ ಭಾಗಗಳಲ್ಲಿ ಅಗತ್ಯ ಸಾಮಗ್ರಿಗಳ ಸಾಗಣೆಗಾಗಿ, ಸರಕು ರೈಲುಗಳು ಮತ್ತು ಪಾರ್ಸೆಲ್ ರೈಲುಗಳ ಸೇವೆ ಮುಂದುವರಿಯುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement

Advertisement

ರೈಲ್ವೆ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣದ ಆವರಣದ ಹೊರಗಿನ ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ಪ್ರಯಾಣಕ್ಕಾಗಿ ರೈಲು ಪ್ರಯಾಣ ಟಿಕೆಟ್ ಕಾಯ್ದಿರಿಸುವ ಎಲ್ಲಾ ಕೌಂಟರ್‌ಗಳು ಮೇ 3 ರವರೆಗೆ ಮುಚ್ಚಲ್ಪಡುತ್ತವೆ.

ನಾಗರಿಕ ವಿಮಾನಯಾನಕ್ಕೆ ಸಂಬಂಧಿಸಿದಂತೆ "ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳನ್ನು 3 ಮೇ 2020 ರ ರಾತ್ರಿ 11: 59 ರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಡಿಜಿಸಿಎ ಟ್ವೀಟ್ ನಲ್ಲಿ ತಿಳಿಸಿದೆ.

ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement