ದೇಶ

ಮುಧೋಳ: ಮದರಸಾ ಬಳಿ ಕರ್ತವ್ಯ ನಿರತ ಪೊಲೀಸ್ ಪೊಲೀಸ್ ಪೇದೆಗೆ ಕೊರೋನಾ ಸೋಂಕು! 

Srinivas Rao BV

ಬೆಂಗಳೂರು: ಮುಧೋಳದಲ್ಲಿ ಮದರಸಾ ಬಳಿ ಕರ್ತವ್ಯ ನಿರತರಾಗಿದ್ದ 39 ವರ್ಷದ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗುಲಿದೆ. ಪೊಲೀಸ್ ಇಲಾಖೆಯಲ್ಲಿ ಕೊರೋನಾ ಸೋಂಕು ತಗುಲಿದ ಮೊದಲ ಪ್ರಕರಣ ಇದಾಗಿದೆ. 

ರಾಜ್ಯದಲ್ಲಿ ಏ.15 ರಂದು ಒಟ್ಟು 17 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಮುಧೋಳದ ಪೊಲೀಸ್ ಪೇದೆಯದ್ದೂ ಇದೆ. 

ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 10 ಮಂದಿಯನ್ನು ಮುಧೋಳದ ಮದರಸಾನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಈ ಮದರಸಾ ಬಳಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನಾ ಸೈನಿಕ, ಪೊಲೀಸ್ ಪೇದೆಗೆ ಸೋಂಕು ತಗುಲಿದೆ. 

ಜಮಖಂಡಿ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿ, ಪ್ರತಿ ನಿತ್ಯ ಮುಧೋಳಕ್ಕೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಎಸ್ ಪಿ ಲೋಕೇಶ್ ಜಗಲಸರ್ ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಕೊರೋನಾ ತಡೆಗೆ ಮುನ್ನೆಲೆಯಲ್ಲಿರುವ ಸೈನಿಕರಾಗಿದ್ದಾರೆ. ನಮ್ಮ ಸಿಬ್ಬಂದಿಗೆ ಕೊರೋನಾ ಹರಡಿರುವುದು ಬೇಸರದ ಸಂಗತಿ. ಪೊಲೀಸ್ ಸಿಬ್ಬಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವವರೆಗೂ ಅವರು ಹಾಗೂ ಅವರ ಕುಟುಂಬದವರೊಂದಿಗೆ ಇಲಾಖೆ ಇರಲಿದೆ. ಕೊರೋನಾ ಸೋಂಕಿತ ಸಿಬ್ಬಂದಿಯ ಜೊತೆಗೆ ಸಂಪರ್ಕದಲ್ಲಿದ್ದ ಸಹೋದ್ಯೋಗಿಗಳು ಹಾಗೂ ಕುಟುಂಬ ಸದಸ್ಯರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. ಸಿಬ್ಬಂದಿಗೆ ಸೋಂಕು ತಗುಲಿರುವ ಮೂಲ ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ. 

SCROLL FOR NEXT