ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ತವರಿಗೆ ಕರೆ ತನ್ನಿ: ಸರ್ಕಾರಕ್ಕೆ ರಾಹುಲ್ ಆಗ್ರಹ
ಕೊರೋನಾ ವೈರಸ್ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ಭಾರತಕ್ಕೆ ಕರೆತರುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬುಧವಾರ ಆಗ್ರಹಿಸಿದ್ದಾರೆ.
ನವದೆಹಲಿ: ಕೊರೋನಾ ವೈರಸ್ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ಭಾರತಕ್ಕೆ ಕರೆತರುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬುಧವಾರ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಎಲ್ಲಾ ವ್ಯವಹಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸಾವಿರಾರು ಭಾರತೀಯ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಭಾರತೀಯರನ್ನು ಮರಳಿ ಭಾರತಕ್ಕೆ ಕರೆತರಬೇಕೆಂದು ರಾಹುಲ್ ಗಾಂಧಿಯವರು ಆಗ್ರಹಿಸಿದ್ದಾರೆ.
ಸಂಕಷ್ಟದಲ್ಲಿರುವ ನಮ್ಮ ಸಹೋದರ ಹಾಗೂ ಸಹೋದರಿಯರನ್ನು ಭಾರತಕ್ಕೆ ಕರೆತರಲು ಸರ್ಕಾರ ವಿಮಾನವೊಂದನ್ನು ನಿಯೋಜಿಸಿ, ಕ್ವಾರಂಟೈನ್ ಕ್ರಮಗಳೊಂದಿಗೆ ಭಾರತಕ್ಕೆ ಕರೆತರಬೇಕೆಂದು ತಿಳಿಸಿದ್ದಾರೆ.