ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ

Sumana Upadhyaya

ಜಮ್ಮು: ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‌ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಘಟನೆ ನಡೆದ ಕೂಡಲೇ ಯಾವುದೇ ವದಂತಿಗಳು ಹರಡದಂತೆ ಜಿಲ್ಲೆಯಾದ್ಯಂತ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಶೋಪಿಯಾನ್‌ನ ಕೀಗಮ್ ಪ್ರದೇಶದಲ್ಲಿ ಜಂಟಿ ಶೋಧಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿರುವಾಗ ಒಂದು ಕಡೆ ಅಡಗಿ ಕುಳುತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಭದ್ರತಾ ಪಡೆಗಳು ಇದಕ್ಕೆ ಪ್ರತಿಯಾಗಿ ಗುಂಡು ಹಾರಿಸಿದಾಗ ಗುಂಡಿನ ಚಕಮಕಿ ನಡೆದಿದೆ.

ಘಟನಾ ಪ್ರದೇಶಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿದ್ದು, ಈ ಪ್ರದೇಶದ ಅಕ್ಕಪಕ್ಕದ ಗ್ರಾಮಗಳನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಕಾರ್ಯಾಚರಣೆ ಮಂದುವರೆದಿತ್ತು.   

SCROLL FOR NEXT