ಸಂಗ್ರಹ ಚಿತ್ರ 
ದೇಶ

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೋನಾ: 20 ಮಂದಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ಭಾರತೀಯ ನೌಕಾಪಡೆಗೂ ಕೊರೋನಾ ವೈರಸ್ ತಟ್ಟಿದ್ದು, ಮುಂಬೈನಲ್ಲಿ 20 ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮುಂಬೈ: ಭಾರತೀಯ ನೌಕಾಪಡೆಗೂ ಕೊರೋನಾ ವೈರಸ್ ತಟ್ಟಿದ್ದು, ಮುಂಬೈನಲ್ಲಿ 20 ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಭಾರತೀಯ ನೌಕಾಪಡೆಯ 20 ಸೇಲರ್'ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿಗೆಯಲ್ಲಿ ವೈರಸ್ ದೃಢುಪಟ್ಟಿದ್ದು, ಮುಂಬೈನ ನೌಕಾಪಡೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನೌಕಾಪಡೆಯಲ್ಲಿ ವೈರಸ್ ಪತ್ತೆಯಾಗಿರುವುದು ಇದೇ ಮೊದಲಾಗಿದ್ದು, ಇದೀಗ ಸೋಂಕು ಪತ್ತೆಯಾಗಿರುವ ಸಿಬ್ಬಂದಿಗಳೊಂದಿಗೆ ಸಂಪರ್ಕ ಹೊಂದಿದ್ದವರಿಗಾಗಿ ಕಾರ್ಯಾಚರಣೆ ಆರಂಭವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಸ್ತುತ ಸೋಂಕು ಪತ್ತಯಾಗಿರುವ ಸೇಲರ್'ಗಳು ಐಎನ್ಎಸ್ ಆಂಗ್ರೆಯಲ್ಲಿ ನೀಡಲಾಗಿದ್ದ ವಸತಿಗಳಲ್ಲಿ ಇದ್ದರು. ಸರಕು ಸಾಗಣೆ ಮತ್ತು ಆಡಳಿತ ವ್ಯವಹಾರಗಳಲ್ಲಿನ ನೌಕಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನೌಕಾಪಡೆ ಕಮಾಂಡ್'ಗೆ ಐಎನ್ಎಸ್ ಆಂಗ್ರೆ ಸಹಕಾರಿಯಾಗಿದೆ. 

ಅಗತ್ಯ ಕರ್ತವ್ಯಗಳಿಗಾಗಿ ನೌಕಾಪಡೆ ವಲಯಗಳಲ್ಲಿ ಸಿಬ್ಬಂದಿ ಸಂಚರಿಸಿದ ಪರಿಣಾಮ ಸೋಂಕು ಹರಡಿರುವ ಸಾಧ್ಯತೆಗಳಿವೆ. ನೌಕಾಪಡೆ ಹಗಡುಕಟ್ಟೆಯಲ್ಲಿರುವ ಐಎನ್ಆಸ್ ಆಂಗ್ರೆಯಿಂದ ಕೆಲವು 100 ಮೀಟರ್'ಗಳ ಅಂತರದಲ್ಲಿ ಯುದ್ಧ ನೌಕೆಗಳು ಹಾಗೂ ಜಲಾಂತರ್ಗಾಮಿ ನೌಕೆಗಳಿವೆ ಎಂದು ಹೇಳಲಾಗುತ್ತಿದೆ. 

ಪ್ರಸ್ತುತ ಸೋಂಕಿಗೊಳಗಾಗಿರುವ ಸೇಲರ್ ಗಳು ಐಎನ್'ಹೆಚ್ಎಸ್ ಅಶ್ವಿನಿ, ನೌಕಾಪಡೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಮಹಾರಾಷ್ಟ್ರ ರಾಜ್ಯ ದೇಶದಲ್ಲಿಯೇ ಅತೀ ಹೆಚ್ಚು ವೈರಸ್ ಪತ್ತೆಯಾಗಿರುವ ರಾಜ್ಯವಾಗಿದೆ. ಈ ರಾಜ್ಯದಲ್ಲಿ ಒಟ್ಟು 3,205 ಪ್ರಕರಣಗಳು ಪತ್ತೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ