ರಾಹುಲ್ ಗಾಂಧಿ 
ದೇಶ

ಕೊರೋನಾ ದೊಡ್ಡ ಸವಾಲು, ಹಾಗೆಯೇ ಅದೊಂದು ಉತ್ತಮ ಅವಕಾಶ ಕೂಡ: ರಾಹುಲ್ ಗಾಂಧಿ

ಜಗತ್ತಿನಾದ್ಯಂತ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕೊರೋನಾ ಸೋಂಕು ದೊಡ್ಡ ಸವಾಲು ಮಾತ್ರವಲ್ಲ. ಅದೊಂದು ಅವಕಾಶವೂ ಹೌದು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಜಗತ್ತಿನಾದ್ಯಂತ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕೊರೋನಾ ಸೋಂಕು ದೊಡ್ಡ ಸವಾಲು ಮಾತ್ರವಲ್ಲ. ಅದೊಂದು ಅವಕಾಶವೂ ಹೌದು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಜಾಗತಿಕ ಪಿಡುಗಾದ ಕೋವಿಡ್–19 ದೊಡ್ಡ ಸವಾಲು. ಆದರೆ, ಅದೊಂದು ಅವಕಾಶವೂ ಆಗಿದೆ. ಬಿಕ್ಕಟ್ಟಿನ ಸಂದರ್ಭಗಳಲ್ಲಿ ಹೊಸರೀತಿಯ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮಲ್ಲಿರುವ ಭಾರಿ ಸಂಖ್ಯೆಯ ವಿಜ್ಞಾನಿಗಳು, ಎಂಜಿನಿಯರ್‌ಗಳು, ಅಂಕಿ–ಅಂಶ ತಜ್ಞರನ್ನು ಒಟ್ಟುಗೂಡಿಸಬೇಕಿದೆ’ ಎಂದು ಬರೆದುಕೊಂಡಿದ್ದಾರೆ.

ಕೋವಿಡ್‌–19 ಅಪಾಯದ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಹುಲ್‌ ಈ ಹಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದರು. ಮಾತ್ರವಲ್ಲದೆ ಟೆಸ್ಟಿಂಗ್‌ ಕಿಟ್‌ಗಳನ್ನು ಸಕಾಲದಲ್ಲಿ ಖರೀದಿಸಲು ಸರ್ಕಾರ ಗಮನಕೊಡಲಿಲ್ಲ ಎಂದು ಟೀಕಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?