ದೇಶ

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

Manjula VN

ನವದೆಹಲಿ: ದೇಶದಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಲು ದೆಹಲಿಯ ತಬ್ಲೀಘಿ ಜಮಾತ್ ಕಾರ್ಯಕರ್ತರೇ ಕಾರಣ ಎಂಬುದು ಬೆಳಕಿಗೆ ಬಂದ ಬೆನ್ನಲ್ಲೇ, ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರೂ ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೊಳಪಡಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ. 

ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಬಹುತೇಕ ರೊಹಿಂಗ್ಯಾ ಮುಸ್ಲಿಮರು ಭಾಗಿಯಾಗಿದ್ದು, ಅವರಲ್ಲೂ ಸೋಂಕು ತಗುಲಿರುವ ಶಂಕೆಗಳು ವ್ಯಕ್ತವಾಗಿದೆ. 

ಈ ಹಿನ್ನೆಲೆಯಲ್ಲಿ ರೊಹಿಂಗ್ಯಾ ಮುಸ್ಲಿಮರನ್ನು ಕೊರೋನಾ ಪತ್ತೆ ಪರೀಕ್ಷೆಗೊಳಪಡಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ಸೂಚನೆ ನೀಡಿದೆ. 

ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ತಬ್ಲೀಘಿ ಜಮಾತ್ ಹಮ್ಮಿಕೊಕಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತದಲ್ಲಿರುವ ರೊಹಿಂಗ್ಯಾ ಮುಸ್ಲಿಮರು ಸಾಕಷ್ಟು ಸಂಖ್ಯೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.

ಪ್ರಸಕ್ತ ದೆಹಲಿ, ಜಮ್ಮು, ಹೈದರಾಬಾದ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 40,000ಕ್ಕೂ ಹೆಚ್ಚು ರೊಹಿಂಗ್ಯಾ ವಲಸಿಗರು ವಾಸಿಸುತ್ತಿದ್ದಾರೆ. 

SCROLL FOR NEXT