ಸ್ವರೂಪಾನಂದ ಸರಸ್ವತಿ ಸ್ವಾಮೀಜಿ 
ದೇಶ

ಸಾಧು-ಸನ್ಯಾಸಿಗಳ ಹತ್ಯೆ: ಮಹಾರಾಷ್ಟ್ರ ಸಿಎಂಗೆ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಪತ್ರ

ಮಹಾರಾಷ್ಟ್ರದಲ್ಲಿ ಜುನಾ ಅಖಾಡದ ಸಾಧು-ಸನ್ಯಾಸಿಗಳನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯ ಬಗ್ಗೆ ದ್ವಾರಕಾ- ಜ್ಯೋತಿರ್ಮಠದ  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಜುನಾ ಅಖಾಡದ ಸಾಧು-ಸನ್ಯಾಸಿಗಳನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯ ಬಗ್ಗೆ ದ್ವಾರಕಾ- ಜ್ಯೋತಿರ್ಮಠದ  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.

ಪೊಲೀಸರ ಸಮ್ಮುದಖದಲ್ಲೇ ಸನ್ಯಾಸಿಗಳನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಈ ಘಟನೆ ಸುಸಂಸ್ಕೃತ ಹಿಂದೂ ಸಮಾಜಕ್ಕೆ ಆತಂಕ ಉಂಟುಮಾಡಿದೆ. ಈ ರೀತಿಯ ಕೃತ್ಯ ಆತಂಕವಾದಿಗಳದ್ದಾಗಿದೆ.

ಸನ್ಯಾಸಿಗಳನ್ನು ಹೊಡೆದು ಸಾಯಿಸಿರುವ ವಿಡಿಯೋ ದೇಶಾದ್ಯಂತ ತಲುಪಿದೆ. ಪೊಲೀಸರಿದ್ದರೂ ಯಾವುದೇ ಭಯ, ಭೀತಿ ಇಲ್ಲದೇ ಹಲ್ಲೆ, ಹತ್ಯೆ ನಡೆದಿದೆ. ಅರಾಜಕತೆಗೆ ಇದಕ್ಕಿಂತ ಹೆಚ್ಚಿನ ಉದಾಹರಣೆ ಇನ್ನೇನು ಇರಲು ಸಾಧ್ಯ? ಈ ಕೃತ್ಯಕ್ಕೆ ಕಾರಣರಾಗಿರುವ ದೋಷಿಗಳಿಗೆ ಶೀಘ್ರವೇ ಕಠಿಣ ಶಿಕ್ಷೆ ವಿಧಿಸಬೇಕೆಂದು  ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ