ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋ 
ದೇಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋಗ, ಅಂತ್ಯಸಂಸ್ಕಾರಕ್ಕೆ ಯೋಗಿ ಗೈರು!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಲಕ್ನೋ:  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಬೆಳಗ್ಗೆ 10.44ರ ಸುಮಾರಿಗೆ ಆನಂದ್‌ ಸಿಂಗ್ ಅವರು ಕೊನೆಯುಸಿರೆಳೆದರು ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್‌ ಅವಶ್ತಿ ದೃಢಪಡಿಸಿದ್ದಾರೆ.

ಗಂಭೀರ ಅನಾರೋಗ್ಯದಿಂದಿದ್ದ ಸಿಂಗ್‌ ಅವರು ಮಾರ್ಚ್ 15ರಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕಳೆದ ರಾತ್ರಿ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

ರಾಜ್ಯದಲ್ಲಿ ಕೊರೋನಾ ಪ್ರಭಾವ ಹೆಚ್ಚಾಗಿದ್ದು, ವೈರಸ್ ವಿರುದ್ಧ ಹೋರಾಡಲು ಲಾಕ್'ಡೌನ್ ಕಠಿಣವಾಗಿ ಜಾರಿ ಮಾಡುವ ಅಗತ್ಯವಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video