ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಮಹಾಮಾರಿ ಆರ್ಭಟ: 24 ಗಂಟೆಗಳಲ್ಲಿ 19,984ಕ್ಕೆ ಏರಿದ ಸೋಂಕಿತರ ಸಂಖ್ಯೆ, 50 ಮಂದಿ ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 19,984ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್'ಗೆ ಹೊಸದಾಗಿ 50 ಮಂದಿ ಬಲಿಯಾಗಿದ್ದಾರೆ. 

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 19,984ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್'ಗೆ ಹೊಸದಾಗಿ 50 ಮಂದಿ ಬಲಿಯಾಗಿದ್ದಾರೆ. 

ಮಂಗಳವಾರ ಒಂದೇ ದಿನ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟಾರಯಾಗಿ 1545 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 19,984ಕ್ಕೆ ತಲುಪಿದೆ. ಅಲ್ಲದೆ, ಸಾವಿನ ಸಂಖ್ಯೆ 640ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿಯೇ ಅತೀ ಹೆಚ್ಚು ಸೋಂಕು ಪತ್ತೆಯಾಗಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಅದೇ ರೀತಿಯ ಬೆಳವಣಿಗೆ ಮುಂದುವರೆದಿದೆ. ನಿನ್ನೆ ಮಹಾರಾಷ್ಟ್ರದಲ್ಲಿ ಹೊಸದಾಗಿ 552 ಪ್ರಕರಣ ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖಅಯೆ 5218ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 251 ಜನ ಸಾವನ್ನಪ್ಪಿದ್ದಾರೆ. ಈ ಪೈಕಿ ಮುಂಬೈ ಒಂದರಲ್ಲಿಯೇ 3445 ಕೇಸು ದಾಖಲಾಗಿದ್ದು, 150 ಜನ ಸಾವನ್ನಪ್ಪಿದ್ದಾರೆ. ಇನ್ನು ಗುಜರಾತ್ ನಲ್ಲಿ 239 ಹೊಸ ಪ್ರಕರಣ ದೃಢಪಟ್ಟಿದೆ. 

ಈ ನಡುವೆ ದೇಶದಲ್ಲಿ ಈ ವರೆಗೆ 4.49 ಲಕ್ಷ ಜನರ ಮಾದರಹಿ ಪರೀಕ್ಷಿಸಲಾಗಿದೆ. ಕರ್ನಾಟಕದ ಕೊಡಗು ಸೇರಿದಂತೆ ದೇಶದ 4 ರಾಜ್ಯಗಳಲ್ಲಿ ಕಳೆದ 28 ದಿನಗಳಿಂದ ಹೊಸ ಪ್ರಕರಣ ದಾಖಲಾಗಿಲ್ಲ. 23 ರಾಜ್ಯಗಳ 61 ಜಿಲ್ಲೆಗಲಲ್ಲಿ 14 ದಿನಗಳಲ್ಲಿ ಹೊಸ ಕೇಸು ದಾಖಲಾಗಿಲ್ಲ. ಭಾರತದಲ್ಲಿ ಈ ವವರೆಗೆ ಸೋಂಕಿತರ ಪೈಕಿ ಶೇ.17.48 ರಷ್ಟು ಜನ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್