ಉತ್ತರ ಪ್ರದೇಶದಲ್ಲಿ ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು! 
ದೇಶ

ಉತ್ತರ ಪ್ರದೇಶದಲ್ಲಿ ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು! 

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ. 

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ. 

ಜಿಲ್ಲಾ ಮಟ್ಟದಲ್ಲಿ ಪೊಲೀಸ್ ದಾಳಿಯ ವೇಳೆ ವಶಕ್ಕೆ ಪಡೆಯಲಾಗಿರುವ ಕೋವಿಡ್-19 ಶಂಕಿತ ತಬ್ಲಿಘಿ ಜಮಾತ್ ನ ಸದಸ್ಯರನ್ನು ಬಂಧಿಸಿಡಲು 23 ತಾತ್ಕಾಲಿಕ ಜೈಲುಗಳನ್ನು ತೆರೆಯಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.  ಮೊರಾದಾಬಾದ್ ನ ಜೈಲಿನಲ್ಲಿರಿಸಲಾಗಿರುವ 6 ತಬ್ಲಿಘಿ ಜಮಾತ್ ನ ಸದಸ್ಯರಿಗೆ ಕೊರೋನಾ ರೋಗಲಕ್ಷಣ ಕಾಣಿಸಿಕೊಂಡಿದ್ದು, ಉಳಿದ ಖೈದಿಗಳಿಗೆ ಸೋಂಕು ತಗುಲದಂತೆ ಎಚ್ಚರ ವಹಿಸಲು ಕೊರೋನಾ ಶಂಕಿತ, ಜಮಾತಿಗಳಿಗಾಗಿಯೇ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿದೆ.

ಕಳೆದ 15 ದಿನಗಳಲ್ಲಿ ರಾಜ್ಯದ ಪೊಲೀಸರು 20 ಜಿಲ್ಲೆಗಳಾದ್ಯಂತ, ದೆಹಲಿಯಲ್ಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗಿಯಾಗಿದ್ದ ಒಟ್ಟು 3,000 ತಬ್ಲಿಘಿ ಜಮಾತ್ ಸದಸ್ಯರನ್ನು ಗುರುತಿಸಿದ್ದಾರೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವಸ್ಥಿ ಮಾಹಿತಿ ನೀಡಿದ್ದಾರೆ. 

ವಿದೇಶದಿಂದ ಆಗಮಿಸಿದ್ದ 325 ತಬ್ಲಿಘಿ ಜಮಾತ್ ನ ಸದಸ್ಯರನ್ನು ಬಂಧಿಸಲಾಗಿದ್ದು, 45 ಎಫ್ಐಆರ್ ಗಳನ್ನು ದಾಖಲಿಸಿ, ಪಾಸ್ಪೋರ್ಟ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!