ದೇಶ

ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್

Sumana Upadhyaya

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ದೆಹಲಿಯಲ್ಲಿ ಇಂದು ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಕೋವಿಡ್-19 ವೈರಸ್ ನ್ನು ತಡೆಗಟ್ಟುವಲ್ಲಿ ನಾವು ಎಷ್ಟು ಸಮರ್ಥರಾಗಿದ್ದೇವೆ ಎನ್ನುವುದರ ಮೇಲೆ ಲಾಕ್ ಡೌನ್ ನ ಯಶಸ್ಸು ನಿರ್ಧರಿತವಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಹಕಾರ ಅತ್ಯಗತ್ಯ. ಸಂಪನ್ಮೂಲಗಳ ಲಭ್ಯತೆ ಮೇಲೆ ಕೊರೋನಾ ವಿರುದ್ಧದ ಹೋರಾಟ ಅವಲಂಬಿತವಾಗಿರುತ್ತದೆ ಎಂದರು.

ಕೇಂದ್ರ ಸರ್ಕಾರದಿಂದ ಕೊರೋನಾ ವಿರುದ್ಧ ಹೋರಾಟದಲ್ಲಿ ಸಹಕಾರ ಸಿಗುತ್ತಿಲ್ಲ ಎಂದು ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಆರೋಪಿಸಿದರು.

SCROLL FOR NEXT