ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ದೇಶದಲ್ಲಿ ಸೋಂಕಿತರ ಸಂಖ್ಯೆ 21393ಕ್ಕೆ ಏರಿಕೆ, ಮಹಾಮಾರಿಗೆ 681 ಮಂದಿ ಬಲಿ

ಮಹಾಮಾರಿ ಕೊರೋನಾ ವೈರಸ್ ದೇಶವನ್ನು ಎಡೆಬಿಡದೆ ಕಾಡುತ್ತಲೇ ಇದ್ದು, ದೇಶದಲ್ಲಿ ಈ ವರೆಗೂ ವೈರಸ್'ಗೆ 681 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 21393 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 23 Apr 2020, 10:28 am

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶವನ್ನು ಎಡೆಬಿಡದೆ ಕಾಡುತ್ತಲೇ ಇದ್ದು, ದೇಶದಲ್ಲಿ ಈ ವರೆಗೂ ವೈರಸ್'ಗೆ 681 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 21393 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದ್ದು, ದೇಶದಲ್ಲಿ 21393 ಮಂದಿ ಸೋಂಕಿಗೊಳಗಾಗಿದ್ದು, ವೈರಸ್'ಗೆ 681 ಮಂದಿ ಬಲಿಯಾಗಿದ್ದಾರೆ. ಸೊಂಕಿಗೊಳಗಾಗಿರುವ 21393 ಮಂದಿಯ ಪೈಕಿ 16454 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 4257 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆಂದು ಹೇಳಿದೆ. 

ಈ ನಡುುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಕೂಡ ವೈದ್ಯಕೀಯ ಪರೀಕ್ಷೆಗಳ ಕುರಿತಂತೆ ಮಾಹಿತಿ ನೀಡಿದ್ದು, 500542  ಸ್ಯಾಂಪಲ್'ಗಳ ಪೈಕಿ ಏಪ್ರಿಲ್ 23ರ ಬೆಳಿಗ್ಗೆ 9ರವರೆಗೆ 485172 ಮಂದಿಯ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 21797 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement