ಅಶೋಕ್ ಗೆಹ್ಲೊಟ್ 
ದೇಶ

ಕೊವಿಡ್-19 ಎದುರಿಸಲು ಹಣಕಾಸು ನೆರವು ನೀಡಿ: ಕೇಂದ್ರಕ್ಕೆ ನಾಲ್ವರು ಕಾಂಗ್ರೆಸ್ ಮುಖ್ಯಮಂತ್ರಿಗಳ ಒತ್ತಾಯ

ಮಹಾಮಾರಿ ಕೊರೋನಾ ವೈರಸ್ ಎದುರಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಾಕಷ್ಟು ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ನಾಲ್ವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಗುರುವಾರ ಆರೋಪಿಸಿದ್ದಾರೆ.

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಎದುರಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಾಕಷ್ಟು ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ನಾಲ್ವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಗುರುವಾರ ಆರೋಪಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹಾಗೂ ಪುದುಚೇರಿ ಸಿಎಂ ವಿ ನಾರಾಯಣಸ್ವಾಮಿ ಅವರು ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

ನಾವು ಕ್ಷಿಪ್ರ ಪರೀಕ್ಷೆಗೆ ಒತ್ತು ನೀಡಿದ್ದೇವೆ. ಆದರೆ ದುರದೃಷ್ಟವಶಾತ್ ಕೊವಿಡ್-19 ಪರೀಕ್ಷಾ ಕಿಟ್‌ಗಳು ವಿಫಲವಾಗಿವೆ ... ಕಿಟ್‌ಗಳು, ವೆಂಟಿಲೇಟರ್‌ಗಳು ಇತ್ಯಾದಿಗಳನ್ನು ಕೇಂದ್ರೀಕೃತವಾಗಿ ಖರೀದಿಸುವ ತುರ್ತು ಅವಶ್ಯಕತೆಯಿದೆ. ಇದರಿಂದ ಲಭ್ಯತೆ, ಗುಣಮಟ್ಟ ಮತ್ತು ಪ್ರಮಾಣವನ್ನು ಖಚಿತಪಡಿಸಿಕೊಳ್ಳಬಹುದ ಎಂದಿದ್ದಾರೆ.

ರಾಜ್ಯಗಳಿಗೆ ಆರ್ಥಿಕವಾಗಿ ಸಹಾಯ ಮಾಡಲು ಕೇಂದ್ರ ಸರ್ಕಾರ ಮುಂದೆ ಬರದಿದ್ದರೆ, ಕೊವಿಡ್-19 ವಿರುದ್ಧದ ಹೋರಾಟವು ದುರ್ಬಲಗೊಳ್ಳುತ್ತದೆ. ರಾಜ್ಯಗಳಿಗೆ ದೊಡ್ಡ ಹಣಕಾಸಿನ ಪ್ಯಾಕೇಜ್ ಇಲ್ಲದಿದ್ದರೆ, ಲಾಕ್‌ಡೌನ್ ನಂತರ ರಾಜ್ಯಗಳು ಸಾಮಾನ್ಯ ಸ್ಥಿತಿಗೆ ಹೇಗೆ ಮರಳುತ್ತದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಣಕಾಸಿನ ನೆರವು ನೀಡದಿದ್ದರೆ ಕೊವಿಡ್-19 ವಿರುದ್ಧ ಹೋರಾಟ ಗೆಲ್ಲುವುದು ಹೇಗೆ ಎಂದಿರುವ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, ಕೇಂದ್ರ ಕೂಡಲೇ ರಾಜ್ಯಗಳಿಗೆ ಹಣಕಾಸಿನ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT