ಬಾಬು ಜಗಜೀವನ್ ರಾಮ್ ಸ್ಮಾರಕ ಸರ್ಕಾರಿ ಆಸ್ಪತ್ರೆ 
ದೇಶ

14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ; ದೆಹಲಿ ಸರ್ಕಾರಿ ಆಸ್ಪತ್ರೆ ಬಂದ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯಕೀಯ ಸಿಬ್ಬಂದಿಗಳಿಗೇ ಸೋಂಕು ತಗುಲಿರುವುದರಿಂದ ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯಕೀಯ ಸಿಬ್ಬಂದಿಗಳಿಗೇ ಸೋಂಕು ತಗುಲಿರುವುದರಿಂದ ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ.

ಹೌದು.. ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರುತ್ತಲೆ ಇದ್ದು, ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಇದೀಗ, ದೆಹಲಿ ಜಹಾಂಗೀರ್‌ಪುರಿಯಲ್ಲಿರುವ ಬಾಬು ಜಗಜೀವನ್ ರಾಮ್ ಸ್ಮಾರಕ ಸರ್ಕಾರಿ  ಆಸ್ಪತ್ರೆಯಲ್ಲಿ 14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ವೈದ್ಯರು ಮತ್ತು ನರ್ಸ್‌ಗಳು ಸೇರಿದ್ದಾರೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಈ ಮೂಲಕ ಇದುವರೆಗೂ  ದೆಹಲಿಯಲ್ಲಿ ಎರಡು ಆಸ್ಪತ್ರೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಸ್ಪತ್ರೆಯಲ್ಲಿ ಸ್ಯಾನಿಟೈಜೇಷನ್ ಕಾರ್ಯ ನಡೆಸಲಾಗುತ್ತಿದೆ. ಈ ಹಿಂದೆ ದೆಹಲಿಯಲ್ಲಿರುವ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಿಗೂ ಕೊರೋನಾ ವೈರಸ್ ಸೋಂಕು ಅಂಟಿಕೊಂಡ ಪರಿಣಾಮ ಆಸ್ಪತ್ರೆ  ಸ್ಥಗಿತ ಮಾಡಲಾಗಿತ್ತು.

ಇದೀಗ ಈ ಆಸ್ಪತ್ರೆಯನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಅಂತೆಯೇ ಆಸ್ಪತ್ರೆ ಸುತ್ತಮುತ್ತಲ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಘೋಷಣೆ ಮಾಡಲಾಗಿದೆ. ಈ ಆಸ್ಪತ್ರೆಯು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಇಲ್ಲಿ  100 ಬೆಡ್ ಗಳ ವಿಭಾಗವನ್ನು ಕೊರೋನಾ ವೈರಸ್ ಚಿಕಿತ್ಸೆಗಾಗಿಯೇ ಮೀಸಲಿರಿಸಲಾಗಿತ್ತು. 

ದೆಹಲಿಯ ಇತರೆ ಆಸ್ಪತ್ರೆಗಳಲ್ಲೂ ಸ್ಯಾನಿಟೈಜೇಷನ್ ಕಾರ್ಯ
ಇನ್ನು ದೆಹಲಿಯ ಎರಡು ಆಸ್ಪತ್ರೆ ಸಿಬ್ಬಂದಿಗಳಲ್ಲಿ ವೈರಸ್ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ಇದೀಗ ದೆಹಲಿಯ ಎಲ್ಲ ಆಸ್ಪತ್ರೆಗಳಲ್ಲೂ ಸ್ಯಾನಿಟೈಜೇಷನ್ ಕಾರ್ಯ ಮಾಡಲಾಗುತ್ತಿದೆ. ದೆಹಲಿ ಸಫ್ಜರ್ ಜಂಗ್ ಆಸ್ಪತ್ರೆ, ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆ ಸಿಬ್ಬಂದಿಗಳಲ್ಲೂ ಕೊರೋನಾ  ವೈರಸ್ ಪತ್ತೆಯಾಗಿತ್ತು. ಹೀಗಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸ್ಯಾನಿಟೈಜೇಷನ್ ಕಾರ್ಯ ನಡೆಸಲಾಗುತ್ತಿದೆ.

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,376ಕ್ಕೆ ಏರಿಕೆಯಾಗಿದೆ. ಈವರೆಗೂ ದೆಹಲಿಯಲ್ಲಿ 50 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ದೆಹಲಿಯಲ್ಲಿ 184, ಆಗ್ನೇಯ ದೆಹಲಿಯಲ್ಲಿ 130, ಪಶ್ಚಿಮ ದೆಹಲಿಯಲ್ಲಿ 122 ಜನರಿಗೆ ಸೋಂಕು ದೃಢವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT