ಸಾಂದರ್ಭಿಕ ಚಿತ್ರ 
ದೇಶ

ಕೊವಿಡ್-19: ಚೆನ್ನೈ ಸೇರಿ ತಮಿಳುನಾಡಿನ ಐದು ಮಹಾನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ಕಟ್ಟಿಹಾಕುವುದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು...

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ಕಟ್ಟಿಹಾಕುವುದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಚೆನ್ನೈ, ಕೊಯಮತ್ತೂರು, ಮದುರೈ, ಸೇಲಂ ಮತ್ತು ತಿರುಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.

ಏಪ್ರಿಲ್ 26ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 29 ರ ರಾತ್ರಿ 9 ಗಂಟೆಯವರೆಗೆ ಈ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರಲಿದ್ದು, ಈ ಪ್ರದೇಶದಲ್ಲಿ ಕೆಲವು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪಳನಿಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಯಂಬಿಡು ತರಕಾರಿ ಮಾರುಕಟ್ಟೆ, ತರಕಾರಿ ಗಾಡಿಗಳಿಗೆ ಮತ್ತು ಅಣ್ಣಿನ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಐದು ನಗರದಲ್ಲಿ ಯಾವುದೇ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಎಂದಿನಂತೆ ಆಸ್ಪತ್ರೆ, ಮೆಡಿಕಲ್ ಶಾಪ್, ಪ್ರಯೋಗಾಲಗಳು ಮತ್ತು ಅಂಬುಲೆನ್ಸ್ ಸೇವೆ ಲಭ್ಯವಿರಲಿದೆ. ಅಮ್ಮಾ ಕ್ಯಾಂಟೀನ್ ಮತ್ತು ಎಟಿಎಂಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ನೌಕರರು ಮತ್ತು ಬ್ಯಾಂಕ್ ನೌಕರರು ಶೇ. 33ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT