ದೇಶ

ಸೋನಿಯಾ ಗಾಂಧಿ ಅವಹೇಳನ: ಅರ್ನಾಬ್ ಗೋಸ್ವಾಮಿಗೆ ಮೂರು ವಾರ ಬಂಧನದಿಂದ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

Raghavendra Adiga

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಾನಹಾನಿ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ದಾಖಲಾದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅವರಿಗೆ ಮೂರು ವಾರಗಳ ಕಾಲ ರಿಲೀಫ್ ನೀಡಿದೆ. ಸರ್ವೋಚ್ಚ ನ್ಯಾಯಾಲಯವು ಗೋಸ್ವಾಮಿ ಬಂಧನಕ್ಕೆ ಮೂರು ವಾರಗಳ ಕಾಲ ತಡೆ ನೀಡಿದೆ.

ಎಫ್‌ಐಆರ್‌ಗಳ ಆಧಾರದ ಮೇಲೆ ತನ್ನ ವಿರುದ್ಧ ಕೈಗೊಳ್ಳಬಹುದಾದ ಯಾವುದೇ ಕ್ರಮವನ್ನು ತಡೆಹಿಡಿಯಬೇಕೆಂದು ಗೋಸ್ವಾಮಿ ಸಲ್ಲಿಸಿದ್ದ ಮನವಿ ಹಿನ್ನೆಲೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. 

ನಾಗ್ಪುರದಲ್ಲಿ ದಾಖಲಾದ ಪ್ರಾಥಮಿಕ ಪ್ರಕರಣವನ್ನು ಹೊರತುಪಡಿಸಿ ಎಲ್ಲಾ ಎಫ್‌ಐಆರ್‌ಗಳ ವಿಚಾರಣೆಗೆ ಮುಂದಿನ ಆದೇಶದವರೆಗೆ ತಡೆಹಿಡಿಯುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೋಸ್ವಾಮಿ ಅರ್ಜಿಯನ್ನು ವಿಚಾರಣೆ ನಡೆಸಿದೆ.

ಏತನ್ಮಧ್ಯೆ ನಾಗ್ಪುರದಲ್ಲಿ ದಾಖಲಾದ ಎಫ್ಐಆರ್ ಅನ್ನು ನ್ಯಾಯಾಲಯ ಇಂದು ಮುಂಬೈಗೆ ವರ್ಗಾಯಿಸಿದೆ ಮತ್ತು ಗೋಸ್ವಾಮಿ ಅವರ ವಿರುದ್ಧದ ದಾಳಿಗೆ ಸಂಬಂಧಿಸಿದಂತೆ ಸಲ್ಲಿಸಿದ ದೂರಿನ ತನಿಖೆ ನಡೆಸಲಾಗುವುದು ಎಂದಿದೆ.

SCROLL FOR NEXT