ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ ಮಹಾಮಾರಿಗೆ 18 ಮಂದಿ ಬಲಿ, 6,817ಕ್ಕೇರಿದ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮೆರೆಯುತ್ತಿದ್ದು, ಒಂದೇ ದಿನ 18 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ವೈರಸ್ ನಿಂದ ಸಾವನ್ನಪ್ಪಿದ್ದವರ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ವೈರಸ್ ರೌದ್ರನರ್ತನ ಮೆರೆಯುತ್ತಿದ್ದು, ಒಂದೇ ದಿನ 18 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ವೈರಸ್ ನಿಂದ ಸಾವನ್ನಪ್ಪಿದ್ದವರ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದ ಮುಂಬೈ ನಗರಿಯಲ್ಲಿಯೇ ಕೊರೋನಾ ಹಾವಳಿ ಹೆಚ್ಚಾಗಿದ್ದು, ಇದೀಗ ಸಾವನ್ನಪ್ಪಿರುವ 18 ಮಂದಿಯ ಪೈಕಿ 11 ಮಂದಿ ಮುಂಬೈ ನಗರದ ನಿವಾಸಿಗಳಾಗಿದ್ದರು ಎಂದು ತಿಳಿದುಬಂದಿದೆ.
ಈ ನಡುವೆ ಒಂದೇ ದಿನದಲ್ಲಿ 394 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ 6817ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 6.817 ಮಂದಿ ಸೋಂಕಿತರ ಪೈಕಿ 957 ಮಂದಿ ವೈರಸ್'ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದೀಗ ರಾಜ್ಯದಲ್ಲಿ 5,559 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರ ಈ ವರೆಗೂ 1,02,189.ಮಂದಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದೆ ಎಂದು ವರದಿಗಳು ತಿಳಿಸಿವೆ.