ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಭೀತಿ: ಮಕ್ಕಳ ಭವಿಷ್ಯ ವಿಚಾರವಾಗಿ ಜಗಳ, ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಕೋವಿಡ್-19 ಭೀತಿಯಿಂದ ಮಕ್ಕಳ ಭವಿಷ್ಯ ವಿಚಾರವಾಗಿ ದಂಪತಿ ನಡುವೆ ಜಗಳ ಉಂಟಾಗಿ, ಪತ್ನಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ

ನವದೆಹಲಿ: ಕೋವಿಡ್-19 ಭೀತಿಯಿಂದ ಮಕ್ಕಳ ಭವಿಷ್ಯ ವಿಚಾರವಾಗಿ ದಂಪತಿ ನಡುವೆ ಜಗಳ ಉಂಟಾಗಿ, ಪತ್ನಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಪತ್ನಿ ಕೊಂದ ಬಳಿಕ ಆರೋಪಿ ದೆಹಲಿಯ ಮಡಿಪುರ ಪ್ರದೇಶದ ಪೊಲೀಸ್ ತಾನೇ ಹೋಗಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ರಹಿಸುಲ್ ಅಜಾಂ (30) ಎಂದು ಗುರುತಿಸಲಾಗಿದೆ. 

ಜಹಂಗಿರ್ ಪುರಿಯಲ್ಲಿ ಪುಟ್ ವೇರ್ ಅಂಗಡಿ ಇಟ್ಟುಕೊಂಡಿದ್ದ ಅಜಾಂ ಹಾಗೂ ಆತನ ಪತ್ನಿ ಗುಲ್ಶನ್ ನಡುವೆ ಮಕ್ಕಳ ಭವಿಷ್ಯ ವಿಚಾರವಾಗಿ ಜಗಳ ಉಂಟಾಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಕೋಪೊದಿಕ್ತ ಅಜಾಂ ದೊಣ್ಣೆಯಿಂದ ಹೊಡೆದು ಸಾಯಿಸಿರುವುದಾಗಿ ವಿಚಾರಣೆ ವೇಳೆಯಲ್ಲಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಈ ಘಟನೆ ಸಂಬಂಧ ಉಪ ವಿಭಾಗೀಯ ಮ್ಯಾಡಿಸ್ಟ್ರೇಟ್ ಪ್ರಕರಣ ದಾಖಲಿಸಿದ್ದಾರೆ. ಅಜಾಂ ಹಾಗೂ ಆತನ ಪತ್ನಿ ವಾಸಿಸುತ್ತಿದ್ದ ಪ್ರದೇಶ ಕೋವಿಡ್-19 ಕಂಟೈನ್ ಮೆಂಟ್ ವಲಯದಲ್ಲಿದೆ ಎಂದು ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ನಂತರ ಮಾಹಿತಿ ನೀಡಿದ್ದಾರೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!