ದೇಶ

ತಬ್ಲಿಘಿ ಸಭೆಗೆ ಹೋಗಿಬಂದವರ ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ: ಬಿಜೆಪಿ ಸಂಸದ

Lingaraj Badiger

ಲಖನೌ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡಲು ಕಾರಣವಾದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ಹೋಗಿಬಂದವರ ಬಗ್ಗೆ ಮಾಹಿತಿ ನೀಡುವವರಿಗೆ 11 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಅವರು ಘೋಷಿಸಿದ್ದಾರೆ.

ದೆಹಲಿಯ ತಬ್ಲಿಘಿ ಜಮಾತ್‌ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಅಥವಾ ವಿದೇಶದಿಂದ ವಾಪಸಾದ ಅನೇಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮ ಪ್ರಯಾಣದ ಮಾಹಿತಿ ನೀಡಿಲ್ಲ ಮತ್ತು ಕೊವಿಡ್-19 ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಅಂತಹವರ ಬಗ್ಗೆ ಮಾಹಿತಿ ನೀಡಿದರೆ 11 ಸಾವಿರ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೇಂಪುರ್ ಸಂಸದ ಕುಶ್ವಾಹ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಬ್ಲಿಘಿ ಹೋಗಿಬಂದವರು ತಮ್ಮ ಪ್ರಯಾಣದ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಬೇಕು ಹಾಗೂ ಕೊರೋನಾ ಪರೀಕ್ಷೆಗೆ ಒಳಪಡಬೇಕು ಎಂದು ಸಂಸದರು ಹೇಳಿದ್ದಾರೆ. ಒಂದು ವೇಳೆ ಮಾಹಿತಿ ನೀಡದೇ ಇದ್ದಲ್ಲಿ ಅಂತಹವರ ಬಗ್ಗೆ ತಿಳಿಸುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಹೇಳಿದ್ದಾರೆ.

ಕಳೆದ ಮಾರ್ಚ್‌ ನಲ್ಲಿ ದೆಹಲಿಯಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೋನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ ಸೋಂಕು ಹರಡಿದೆ.

SCROLL FOR NEXT