ದೇಶ

ಸರ್ಕಾರ ಪ್ರತಿ ದಿನ ಒಂದು ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಬೇಕು- ರಾಹುಲ್ ಗಾಂಧಿ

Nagaraja AB

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗ ಹರದಡಂತೆ ತಡೆಗಟ್ಟಲು ಸರ್ಕಾರ ಪ್ರತಿ ದಿನ 1 ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು ಯಾದೃಚ್ಛಿಕ ಸಾಮೂಹಿಕ ಪರೀಕ್ಷೆ ಪ್ರಮುಖವಾದ ಅಂಶ ಎಂಬುದನ್ನು ತಜ್ಞರು ಒಪ್ಪಿಕೊಂಡಿದ್ದಾರೆ. ದೇಶದಲ್ಲಿ ಪರೀಕ್ಷಾ ಕಿಟ್ ಗಳ ದಾಸ್ತಾನು ಇದ್ದರೂ ದಿನಕ್ಕೆ ಪ್ರಸ್ತುತ 40,000 ದಿಂದ 1 ಲಕ್ಷ ಪರೀಕ್ಷೆ ನಡೆಸಲು ಅಡಚಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕ್ಷಿಪ್ರ ರೀತಿಯಲ್ಲಿ ಕ್ರಮ ಕೈಗೊಂಡು ಅಡಚಣೆಯನ್ನು ನಿವಾರಿಸಬೇಕಾದ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಕೋವಿಡ್-19 ಸೋಂಕಿನಿಂದ 824 ಜನರು ಮೃತಪಟ್ಟಿದ್ದು, 26, 496  ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ.

SCROLL FOR NEXT