ಸೇನಾ ಕಾರ್ಯಾಚರಣೆ 
ದೇಶ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ 4 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ.

ಶ್ರೀನಗರ: ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ.

ಹೌದು.. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ಕು ಉಗ್ರರನ್ನು ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರಾಂತ್ಯದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ, ಸ್ಥಳೀಯ ಪೊಲೀಸರೊಂದಿಗೆ ಸೇರಿ ಕಾರ್ಯಾಚರಣೆ ಆರಂಭಿಸಿದ್ದು. ಸೇನೆಯ ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೊಲೀಸರು ಜಂಟಿ  ಕಾರ್ಯಾಚರಣೆ ನಡೆಸಿದರು. ಸೇನೆ ಆಗಮಿಸುತ್ತಿದ್ದಂತೆಯೇ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆ ಗರೆದರು. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ನಾಲ್ಕು ಉಗ್ರರನ್ನು ಹೊಡೆದುರುಳಿಸಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು, ಮೃತ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!