ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19 ನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ: ಒಡಿಶಾ ಸರ್ಕಾರದ ಮಹತ್ವದ ನಿರ್ಧಾರ

ದೇಶದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್, ಪತ್ರಕರ್ತರು ಮತ್ತು ವೈದ್ಯರನ್ನೂ ಕಾಡುತ್ತಿರುವ ಹಿನ್ನಲೆಯಲ್ಲಿ ಒಡಿಶಾ ಸರ್ಕಾರ ಕೋವಿಡ್-19 ವೈರಸ್ ಸೋಂಕಿನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಒಡಿಶಾ ಸಿಎಂ ನವೀನ್ ಪಟ್ನಾಯಕ್
Srinivasa Murthy VN
Updated On : 27 Apr 2020, 6:58 pm

ಭುವನೇಶ್ವರ: ದೇಶದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್, ಪತ್ರಕರ್ತರು ಮತ್ತು ವೈದ್ಯರನ್ನೂ ಕಾಡುತ್ತಿರುವ ಹಿನ್ನಲೆಯಲ್ಲಿ ಒಡಿಶಾ ಸರ್ಕಾರ ಕೋವಿಡ್-19 ವೈರಸ್ ಸೋಂಕಿನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಮಹಾರಾಷ್ಟ್ರ, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸುಮಾರು 50ಕ್ಕೂ ಹೆಚ್ಚು ಪತ್ರಕರ್ತರು ಈ ಕೊರೋನಾ ವೈರಸ್ ಗೆ ತುತ್ತಾಗಿದ್ದು, ವೈರಸ್ ಕುರಿತು ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ನಡೆಸುತ್ತಿರುವ ಕಾರ್ಯಕ್ಕೆ ಭಾರಿ ಹಿನ್ನಡೆಯಾಗಿದೆ. ಅದಾಗ್ಯೂ ಎದೆಗುಂದ ಪತ್ರಕರ್ತರು ಪ್ರಾಣದ  ಹಂಗು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ಕಾರಣಕ್ಕೆ ಒಡಿಶಾ ಸರ್ಕಾರ ಕೋವಿಡ್-19 ನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು, ಕೊರೋನಾ ವೈರಸ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಪತ್ರಕರ್ತರು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜಾಗೃತಿ ಅಭಿಯಾನದಲ್ಲಿ ಪತ್ರಕರ್ತರ ಪಾತ್ರ  ಪ್ರಮುಖವಾದದ್ದು. ಹೀಗಾಗಿ ತಮ್ಮ ಸರ್ಕಾರ ಕೋವಿಡ್-19 ವೈರಸ್ ಸೋಂಕಿನಿಂದ ಸಾವನ್ನಪ್ಪುವ ಪತ್ರಕರ್ತರಿಗೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.

Advertisement

Advertisement

ಇನ್ನು ಕೇಂದ್ರ ಸರ್ಕಾರ ಈಗಾಗಲೇ ಕೋವಿಡ್-19 ನಿಂದ ಸಾವನ್ನಪ್ಪುವ ವೈದ್ಯಕೀಯ ಸಿಬ್ಬಂದಿಗಳಿಗೆ ತಲಾ 50ಲಕ್ಷ ರೂ ನೀಡುವ ಕುರಿತು ಘೋಷಣೆ ಮಾಡಿದೆ. 

ಒಡಿಶಾದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ. ಅಂತೆಯೇ 34 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement