ದೇಶ

ಪಿಎಂ ಕೇರ್ಸ್ ನಿಧಿ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ, ಸುಪ್ರೀಂ ಕೋರ್ಟ್ ವಜಾ

Srinivas Rao BV

ನವದೆಹಲಿ: ಕೊರೊನಾ ಹಾವಳಿಯಿಂದ ದೇಶದಲ್ಲಿ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕ ದೇಣಿಗೆ ಸ್ವೀಕರಿಸಲು   ಆರಂಭಿಸಲಾಗಿರುವ ಪಿಎಂ ಕೇರ್ಸ್ ನಿಧಿಯ ಸಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಸೋಮವಾರ ವಜಾಗೊಳಿಸಿದೆ.

ಅರ್ಜಿಯಲ್ಲಿ ಯಾವುದೇ ಅರ್ಹತೆಗಳಿಲ್ಲ ಹಾಗಾಗಿ ವಿಚಾರಣೆ ಸ್ವೀಕಾರ್ಹವಲ್ಲ ಎಂದು ಹೇಳಿರುವ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರ ವಕೀಲ ಶಾಶ್ವತ್ ಆನಂದ್ ಪ್ರಧಾನ ಮಂತ್ರಿ  ಕೇರ್ಸ್ ನಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

SCROLL FOR NEXT