ದೇಶ

ಕೊರೋನಾ ವೈರಸ್: ಭಾರತದಲ್ಲಿ 30 ಸಾವಿರದತ್ತ ಸೋಂಕಿತರ ಸಂಖ್ಯೆ, 937 ಮಂದಿ ಸಾವು

Srinivasamurthy VN

ನವದೆಹಲಿ: ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 1,594 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 29,974ಕ್ಕೆ ಏರಿಕೆಯಾಗಿದೆ.

ಅಂತೆಯೇ 24 ಗಂಟೆಗಳ ಅವಧಿಯಲ್ಲಿ 51 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ ಇಲ್ಲಿಯವರೆಗೂ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 937ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 29,974ಕ್ಕೆ  ಏರಿಕೆಯಾಗಿದ್ದು, ಈ ಪೈಕಿ 7,026 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 22,010 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ.

ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು ಮಾತನಾಡಿ, ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕಳೆದ 28 ದಿನಗಳಿಂದ ದೇಶದ 17 ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ  ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಇದರರ್ಥ ನಾವು ಇದೇ ರೀತಿಯ ನಿರ್ವಹಣೆಯನ್ನು ಮುಂದುವರೆಸಿದರೆ ದೇಶ ಖಂಡಿತಾ ಶೀಘ್ರದಲ್ಲೇ ಕೊರೋನಾ ಮುಕ್ತವಾಗಲಿದೆ ಎಂದು ಹೇಳಿದರು.

ಕೊರೋನಾ ವೈರಸ್ ನ ರಾಜ್ಯಾವಾರು ಪಟ್ಟಿ ಇಂತಿದೆ.

SCROLL FOR NEXT