ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಸಾವಿನ ಸಂಖ್ಯೆ 934ಕ್ಕೆ ಏರಿಕೆ, 29,435ಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಮಹಾಮಾರಿಗೆ ಈ ವರೆಗೂ 934 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 29,435 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಮಹಾಮಾರಿಗೆ ಈ ವರೆಗೂ 934 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 29,435 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 62 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 934ಕ್ಕೆ ೇರಿಕೆಯಾಗಿದೆ. 

ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ 8,590 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಈಗಾಗಲೇ 1,282 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಇನ್ನು ಗುಜರಾತ್ ರಾಜ್ಯದಲ್ಲಿ 3,548 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 162 ಮಂದಿ ಬಲಿಯಾಗಿದ್ದಾರೆ. 394 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,108 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. 877 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಇದರಂತೆ ದೇಶದಲ್ಲಿ ಈ ವರೆಗೂ 6,868 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈ ವರೆಗೂ 21,632 ಸೋಂಕಿನಿಂದ ಬಳಲುತ್ತಿದ್ದು, ಇವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ