ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನೀತಿ ಆಯೋಗ ಉದ್ಯೋಗಿಗೆ ಕೊರೊನ ಸೋಂಕು ದೃಢ: ಪ್ರಧಾನ ಕಚೇರಿ ಸೀಲ್ ಡೌನ್

ರಾಜಧಾನಿ ದೆಹಲಿಯ ನೀತಿ ಆಯೋಗದ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರಿಗೆ ಮಂಗಳವಾರ ಕೊವಿಡ್‍-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಇಲ್ಲಿನ ಇಡೀ ಕಟ್ಟಡಕ್ಕೆ ಬೀಗ ಹಾಕಲಾಗಿದೆ.

ನೀತಿ ಆಯೋಗ ಕಟ್ಟಡ
Sumana Upadhyaya
Updated On : 28 Apr 2020, 2:28 pm

ನವದೆಹಲಿ: ರಾಜಧಾನಿ ದೆಹಲಿಯ ನೀತಿ ಆಯೋಗದ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರಿಗೆ ಮಂಗಳವಾರ ಕೊವಿಡ್‍-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಇಲ್ಲಿನ ಇಡೀ ಕಟ್ಟಡಕ್ಕೆ ಬೀಗ ಹಾಕಲಾಗಿದೆ.

‘ನೀತಿ ಭವನದಲ್ಲಿ ಕೆಲಸ ಮಾಡುವ ಉದ್ಯೋಗಿಗೆ ಸೋಂಕು ದೃಢಪಟ್ಟಿರುವ ವಿಷಯವನ್ನು ಇಂದು ಬೆಳಿಗ್ಗೆ 9 ಗಂಟೆಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ.’ ಎಂದು ನೀತಿ ಆಯೋಗ ಟ್ವಿಟರ್ ನಲ್ಲಿ ತಿಳಿಸಿದೆ.

ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ಕಟ್ಟಡವನ್ನು ಯಾವುದೇ ಉದ್ಯೋಗಿ ಪ್ರವೇಶಿಸದಂತೆ ಮುಚ್ಚಲಾಗಿದೆ. ಕಟ್ಟಡದಲ್ಲಿ ಸೋಂಕು ನಿರೋಧಕ ಸಿಂಪಡಣೆ ಮತ್ತು ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಗಳ ಬಗ್ಗೆ ಕೇಳಲಾಗಿದ್ದು, ತಾನಾಗಿಯೇ ಸಂಪರ್ಕತಡೆಯಲ್ಲಿರುವಂತೆ ಉದ್ಯೋಗಿಗೆ ಸೂಚಿಸಲಾಗಿದೆ ಎಂದು ಆಯೋಗ ಹೇಳಿದೆ. 

Advertisement

Advertisement

ದೇಶದಲ್ಲಿ ಕಳೆದ 12 ತಾಸಿನಲ್ಲಿ ಸೋಂಕಿನಿಂದ 48 ಜನರು ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 1,000 ಸಮೀಪಿಸುತ್ತಿದ್ದು, ಸದ್ಯ ಸಾವಿನ ಸಂಖ್ಯೆ 934ರಷ್ಟಿದೆ. ಪ್ರಕರಣಗಳ ಸಂಖ್ಯೆ ಸದ್ಯ 29,435 ರಷ್ಟಿದ್ದು, ಸಾವಿನ ಪ್ರಮಾಣ ಶೇ 23.3 ರಷ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments