ದೇಶ

'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಯೋಜನೆ ಜಾರಿಗೆ ಮುಂದಾಗಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Raghavendra Adiga

ನವದೆಹಲಿ: ಕೊರೋನಾವೈರಸ್ ಲಾಕ್‌ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಬ್ಸಿಡಿ ಆಹಾರ ಧಾನ್ಯವನ್ನು ಪಡೆಯಲು ಸಾಧ್ಯವಾಗುವಂತೆ'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಯೋಜನೆಯನ್ನು 'ತಾತ್ಕಾಲಿಕವಾಗಿ' ಅಳವಡಿಸಿಕೊಳ್ಳುವ ಕುರಿತು ಪರಿಶೀಲಿಸುವಂತೆ  ಸುಪ್ರೀಂ ಕೋರ್ಟ್ ಕೇಂದ್ರವ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಸರ್ಕಾರದ ಈ ಯೋಜನೆ ಇದೇ ವರ್ಷ ಜೂನ್ ನಿಂದ ಜಾರಿಗೆ ತರಲು ಉದ್ದೇಶಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ  ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ಹೊರಡಿಸಿದ ಆದೇಶದಲ್ಲಿ "ಈ ಹಂತದಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸುವುದು ಸಾಧ್ಯವಿದೆಯೆ ಅಥವಾ ಇಲ್ಲವೆಎಂಬುದನ್ನು ಪರಿಗಣಿಸಲು ನಾವು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇವೆ,ಪ್ರಸ್ತುತ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಲಬೇಕಿದೆ" ಎಂದು ಹೇಳಲಾಗಿದೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಫಲಾನುಭವಿಗಳು ಮತ್ತು ಇತರ ರಾಜ್ಯಗಳ ನಾಗರಿಕರ ಅನುಕೂಲಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲು ಕೋರಿ ವಕೀಲ ರೀಪಕ್ ಕನ್ಸಾಲ್ ಸಲ್ಲಿಸಿದ್ದ ಮನವಿಯನ್ನು ಉನ್ನತ ನ್ಯಾಯಾಲಯ ವಿಚಾರಣೆ ನಡೆಸಿದ್ದು . ಸ್ಥಳೀಯ ಗುರುತಿನ ಚೀಟಿಗಳು ಅಥವಾ ಯಾವುದೇ ಗುರುತಿನ ಚೀಟಿಗಳ ಬೇಡಿಕೆ ಇರುವ ಕಾರಣ ಪ್ರಸ್ತುತ ತಾತ್ಕಾಲಿಕ ವಸತಿ ಶಿಬಿರಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರು ಹಸಿವಿನಿಂದ ಬಳಲುವಂತಾಗಿದೆ. ಹಾಗಾಗಿ ಅವರ ಹಸಿವು ನೀಗಿಸುವಿಕೆ ಖಚಿತಪಡಿಸಿಕೊಳ್ಲಲು ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ಕೋರಿದೆ.

SCROLL FOR NEXT