ಸಂಗ್ರಹ ಚಿತ್ರ 
ದೇಶ

ಕೋವಿಡ್-19 ಲಾಕ್ ಡೌನ್: ಯುಎಇಯಿಂದ ಭಾರತಕ್ಕೆ ಮರಳುವವರಿಗಾಗಿ ಆನ್ ಲೈನ್ ನೋಂದಣಿ ಪ್ರಾರಂಭ! 

ಯುಎಇಯಲ್ಲಿ ಸಿಲುಕಿರುವ ಭಾರತೀಯರು ಮರಳಿ ಸ್ವದೇಶಕ್ಕೆ ವಾಪಸ್ಸಾಗಲು ಇಚ್ಛಿಸುವ ಮಂದಿಗೆ ಅಲ್ಲಿನ ರಾಯಭಾರಿ ಕಚೇರಿ ಆನ್ ಲೈನ್ ನೋಂದಣಿ ಪ್ರಾರಂಭಿಸಿದೆ. 

ನವದೆಹಲಿ: ಯುಎಇಯಲ್ಲಿ ಸಿಲುಕಿರುವ ಭಾರತೀಯರು ಮರಳಿ ಸ್ವದೇಶಕ್ಕೆ ವಾಪಸ್ಸಾಗಲು ಇಚ್ಛಿಸುವ ಮಂದಿಗೆ ಅಲ್ಲಿನ ರಾಯಭಾರಿ ಕಚೇರಿ ಆನ್ ಲೈನ್ ನೋಂದಣಿ ಪ್ರಾರಂಭಿಸಿದೆ. 

ಲಾಕ್ ಡೌನ್ ಹಿನ್ನೆಲೆಯಲ್ಲಿ ಯುಎಇಯಲ್ಲಿ ಹಲವು ಭಾರತೀಯರು ಸಿಲುಕಿದ್ದು, ವಾಪಸ್ ಆಗಮಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಯಭಾರಿ ಕಚೆರಿ ಅಧಿಕಾರಿಗಳು ವಾಪಸ್ಸಾಗಲು ಇಚ್ಛಿಸುತ್ತಿರುವ ಭಾರತೀಯರಿಗೆ ಆನ್ ಲೈನ್ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದೆ. 

www.indianembassyuae.gov.in or Consulate www.cgidubai.gov.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ. 

ಮೇ.03 ವರೆಗೆ ಲಾಕ್ ಡೌನ್ ಘೋಷಣೆ ಮಾಡಿರುವ ಭಾರತ ಸರ್ಕಾರ ದೇಶದ ಒಳಗೆ ಹಾಗೂ ವಿದೇಶಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ. ಈ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ರಕ್ಷಣಾ ಪಡೆಗಳ ಮುಖ್ಯಸ್ಥ, ಸೇನೆ, ವಾಯುಪಡೆ, ನೌಕಾಪಡೆಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಸೂಚನೆ ನೀಡಲಾಗಿತ್ತು. 

 ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಭಾರತೀಯರು ಒಂದೇ ಕುಟುಂಬದವರಾಗಿದ್ದರೂ ಪ್ರತ್ಯೇಕವಾಗಿ ನೋಂದಣಿ ಮಾಡಿಕೊಳ್ಳಬೇಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT