ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ 33 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 1,075 ಸಾವು, ಶೇ.25ರಷ್ಟು ಗುಣಮುಖ: ಕೇಂದ್ರ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,718 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 33 ಸಾವಿರ ಗಡಿ ದಾಟಿದೆ. ಇನ್ನು ಒಟ್ಟಾರೆ 1,075 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 30 Apr 2020, 7:11 pm

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,718 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 33 ಸಾವಿರ ಗಡಿ ದಾಟಿದೆ. ಇನ್ನು ಒಟ್ಟಾರೆ 1,075 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 33,610ಕ್ಕೆ ಏರಿಕೆಯಾಗಿದೆ. ಇನ್ನು 630 ಗುಣಮುಖರಾಗಿದ್ದು ಒಟ್ಟಾರೆ 8,324 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಹೇಳಿದ್ದಾರೆ. 

ಕಳೆದ ಐದು ದಿನಗಳಲ್ಲಿ ದೇಶಾದ್ಯಂತ 49,800 ಮಂದಿಗೆ ಪರೀಕ್ಷೆ ನಡೆಸಲಾಗಿದೆ. 292 ಸರ್ಕಾರಿ ಹಾಗೂ 97 ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement