ದೇಶ

ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರ; 10 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

Srinivasamurthy VN

ಮುಂಬೈ: ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ಒಂದೇ ದಿನ 583 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 583 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 10, 490ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಮತ್ತೆ 20 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಲ್ಲಿ ಸಾವಿನ ಸಂಖ್ಯೆ 450ರ ಗಡಿ ದಾಟಿದೆ. ಇನ್ನು ವಾಣಿಜ್ಯ  ನಗರಿ ಮುಂಬೈವೊಂದರಲ್ಲೇ 7,061 ಸೋಂಕಿತರಿದ್ದು, 290 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ನಗರಗಳ ಪಟ್ಟಿಯಲ್ಲಿ ಮುಂಬೈ ಅಗ್ರ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಪುಣೆ ಇದ್ದು, ಇಲ್ಲಿ ಸೋಂಕಿತರ ಸಂಖ್ಯೆ 1,379ಕ್ಕೆ ಏರಿಕೆಯಾಗಿ, 80 ಮಂದಿ ಸೋಂಕಿತರು  ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಾದ್ಯಂತ ಇಂದು 180 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದು, ಆ ಮೂಲಕ ರಾಜ್ಯದಲ್ಲಿ ಈ ವರೆಗೂ 1,773 ಸೋಂಕಿತರು ಗುಣಮುಖರಾಗಿದ್ದಾರೆ. 

733 ಕಂಟೈನ್ ಮೆಂಟ್ ಝೋನ್ 
ಇನ್ನು ದೇಶದ ಒಟ್ಟಾರೆ ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 733 ಸಕ್ರಿಯ ಕಂಟೈನ್ ಮೆಂಟ್ ಝೋನ್ ಗಳಿವೆ. ಇಲ್ಲಿ ಗರಿಷ್ಠ 10,092 ವಿಚಕ್ಷಣಾ ದಳಗಳನ್ನು ನಿಯೋಜಿಸಲಾಗಿದೆ.

SCROLL FOR NEXT