ಕುಸಿದು ಬಿದ್ದ ಕ್ರೇನ್ 
ದೇಶ

ವಿಶಾಖಪಟ್ಟಣಂನಲ್ಲಿ ಕ್ರೇನ್ ದುರಂತ: 11 ಮಂದಿ ಸಾವು!

ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣಂ: ಈ ಹಿಂದೆ ವಿಷಾನಿಲ ಸೋರಿಕೆ ಪ್ರಕರಣದಿಂದ ಸುದ್ದಿಯಾಗಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ಪ್ರಮಾದ ಘಟಿಸಿದ್ದು, ಕ್ರೇನ್ ಕುಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ಈ ದುರಂತ ಸಂಭವಿಸಿದ್ದು, ಈ ವೇಳೆ ಅಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿದ್ದಾಗ ಇದ್ದಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ಜಾರೆ. ಪ್ರಸ್ತುತ ಕ್ರೇನ್ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. 

ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಡಿಸಿಪಿ ಸುರೇಶ್ ಬಾಬು ಅವರು ತನಿಖೆ ನಡೆಸವುದಾಗಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಇದೇ ವಿಶಾಖಪಟ್ಟಣಂನಲ್ಲಿ ಎಲ್ ಜಿ ಪಾಲಿಮರ್ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ಮತ್ತು ಗ್ಯಾಸ್ ಟ್ಯಾಂಕ್ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದರು. ಈ ಘಟನೆಗಳು ಹಸಿರಾಗಿರುವಂತೆಯೇ ಮತ್ತೊಂದು ದುರಂತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel