ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಪೂಂಚ್'ನ ಜಿಲ್ಲೆಯ ಬಾಲಕೋಟ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಭಾರತೀಯ ಸೇನಾ ಯೋಧರನ್ನು ಗುರಿಯಾಗಿಸಿಟ್ಟುಕೊಂಡು ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಗಡಿಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರೊಬ್ಬರು ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ.
ಕಳೆದ ಬುಧವಾರ ಕೂಡ ಗಡಿಯಲ್ಲಿ ಪಾಕಿಸ್ತಾನದ ಉದ್ಧಟತನವನ್ನು ಪ್ರದರ್ಶಿಸಿತ್ತು. ಬಾರಾಮುಲ್ಲಾ ಗಡಿ ನಿಯಂತ್ರಣ ರಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ಸೇನಾಪಡೆಗಳ ಮೇಲೆ ಶಸ್ತ್ರಾಸ್ತ್ರಗಳು ಹಾಗೂ ಮಾರ್ಟರ್ ಶಲ್ ಗಳ ಮೂಲಕ ದಾಳಿ ನಡೆಸಿತ್ತು.