ದೇಶ

ಶಿಕ್ಷಣ ನೀತಿ ಬದಲಾವಣೆ: ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Srinivasamurthy VN

ನವದೆಹಲಿ: ಶಿಕ್ಷಣ ನೀತಿ ಬದಲಾವಣೆ ಕುರಿತಂತೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ವರ್ಚುವಲ್ ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರಧಾನಿ ಮೋದಿ ಇಂದು 4.30ಕ್ಕೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ಜಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನ ಪರಿಹರಿಸೋ ಚಾಲೆಂಜ್ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನ ಪರಿಹರಿಸಿದ್ದಾರೆ. ಇಂದು ಇದರ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಈ ಫಿನಾಲೆ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಪಾಲ್ಗೊಳ್ಳುವ ಪ್ರಧಾನಿ ಮೋದಿ ಸಂಜೆ 4:30ಕ್ಕೆ ಭಾಷಣ ಮಾಡಲಿದ್ದಾರೆ. ಅಂತೆಯೇ ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ.

ಅಂದ ಹಾಗೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮೂಲಕ ಅನ್ವೇಷಣೆ, ಸಮಸ್ಯೆ ಪರಿಹರಿಸೋ ಮನೋಭಾವ ಮತ್ತು ಔಟ್ ಆಫ್ ದಿ ಬಾಕ್ಸ್ ಆಲೋಚನೆ ಬೆಳೆಸುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. 2017ರಲ್ಲಿ ಮೊದಲು 42 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. 2018ರಲ್ಲಿ ಇದು ಒಂದು ಲಕ್ಷಕ್ಕೆ ಏರಿಕೆಯಾಗಿತ್ತು, 2019ರಲ್ಲಿ ಎರಡು ಲಕ್ಷಕ್ಕೆ ಏರಿಕೆಯಾಗಿತ್ತು. ಇದೀಗ ಈ ವರ್ಷ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್​ನಲ್ಲಿ ಬರೋಬ್ಬರಿ ನಾಲ್ಕೂವರೆ ಲಕ್ಷ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

SCROLL FOR NEXT