ಸಂಗ್ರಹ ಚಿತ್ರ 
ದೇಶ

ಬಕ್ರೀದ್: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ನವದೆಹಲಿ: ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಈದ್ ಉಲ್ ಅದಾ ಹಬ್ಬದ ಶುಭಾಷಯಗಳು. ನ್ಯಾಯಯುತ ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣಾದಾಯಕವಾಗಲಿ. ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. 

ಎಲ್ಲರಿಗೂ ಈದ್ ಉಲ್ ಅದಾ ಹಬ್ಬದ ಶುಭಾಷಯಗಳು. ಈ ಹಬ್ಬ ತ್ಯಾಗ ಮತ್ತು ಸೌಹಾರ್ದತೆಯ ಮನೋಭಾವವನ್ನು ಸಂಕೇತಿಸುತ್ತದೆ. ಒಬ್ಬರು ಎಲ್ಲರ ಯೋಗಕ್ಷೇಮಕ್ಕಾಗಿ ಚಿಂತಿಸಲು ನಮಗೆ ಪ್ರೇರಣೆ ನೀಡುತ್ತದೆ. ಈ ಸಂದರ್ಭದಲ್ಲಿ ನಾವು ನಮ್ಮ ಸಂತೋಷವನ್ನು ಹಂಚಿಕೊಳ್ಳೋಣ, ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT