ದೇಶ

ಕೊರೋನಾ ವೈರಸ್: ಜಮ್ಮು ಕಾಶ್ಮೀರದಲ್ಲಿ ಆಗಸ್ಟ್‌ 5ರ ವರೆಗೆ ಲಾಕ್‌ಡೌನ್ ಮುಂದುವರಿಕೆ

Srinivasamurthy VN

ಶ್ರೀನಗರ: ಮಾರಕ ಕೊರೋನಾ ವೈರಸ್ ಹಾವಳಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರೆದಿರುವಂತೆಯೇ ಅಲ್ಲಿ ಹೇರಲಾಗಿದ್ದ ಲಾಕ್ಡೌನ್ ಅನ್ನು ಆಗಸ್ಟ್ 5ರವರೆಗೂ ಮುಂದುವರೆಸಲಾಗಿದೆ.

ಈ  ಬಗ್ಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಾಹಿತಿ ನೀಡಿದ್ದು,  ರಾಜ್ಯದಲ್ಲಿ ಕೋವಿಡ್–19 ಲಾಕ್‌ಡೌನ್ ನಿರ್ಬಂಧಗಳನ್ನು ಆಗಸ್ಟ್‌ 5ರ ವರೆಗೆ ಮುಂದುವರಿಸುವುದಾಗಿ ಹೇಳಿದೆ. ಈ ಹಿಂದೆ ಜುಲೈ 31ರ ವರೆಗೆ ಲಾಕ್‌ಡೌನ್‌ ಮುಂದುವರಿಸಲಾಗುವುದು ಎಂದು ಸರ್ಕಾರವು ತನ್ನ ಹಿಂದಿನ ಆದೇಶದಲ್ಲಿ ತಿಳಿಸಿತ್ತು.

ಆದರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ರಾಜ್ಯ ಮಾತ್ರವಲ್ಲದೇ 'ದೇಶದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದು ಸೂಕ್ತ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಹೊಸದಾಗಿ 613 ಸೋಂಕು ಪ್ರಕರಣಗಳು ವರದಿಯಾಗಿದ್ದು, 11 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 20,972ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

SCROLL FOR NEXT