ದೇಶ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ'ಗೆ ಕೊರೋನಾ ಪಾಸಿಟಿವ್

Manjula VN

ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಕೊರೋನಾ ಪಾಟಿಸಿವ್ ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ ಅವರು, ಕೊರೋನಾ ಪರೀಕ್ಷೆಗೊಳಗಾಗಿದ್ದು, ವೈದ್ಯಕೀಯ ವರದಿಯಲ್ಲ ವೈರಸ್ ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ. 

ಸಣ್ಣ ಲಕ್ಷಣಗಳು ಕಂಡು ಬಂದಿದ್ದು, ವೈದ್ಯಕೀಯ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್'ಗೊಳಗಾಗಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ವೈದ್ಯಕೀಯ ಶಿಷ್ಟಾಚಾರ ಅನುಸರಿಸುವಂತೆ ಒತ್ತಾಯಿಸಿದ್ದಾರೆ. 

SCROLL FOR NEXT