ಆರ್ಟಿಕಲ್ 370 ರದ್ದತಿಗೆ ಒಂದು ವರ್ಷ: ಗುಪ್ತಚರ ಮಾಹಿತಿ ಮೇರೆಗೆ ಶ್ರೀನಗರದಲ್ಲಿ ಕರ್ಫ್ಯೂ ಜಾರಿ 
ದೇಶ

ಆರ್ಟಿಕಲ್ 370 ರದ್ದತಿಗೆ ಒಂದು ವರ್ಷ: ಗುಪ್ತಚರ ಮಾಹಿತಿ ಮೇರೆಗೆ ಶ್ರೀನಗರದಲ್ಲಿ ಕರ್ಫ್ಯೂ ಜಾರಿ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗಿದ್ದ ಸಂವಿಧಾನದ ಆರ್ಟಿಕಲ್ 370 ರದ್ದತಿಗೆ ಆ.05 ಕ್ಕೆ ಒಂದು ವರ್ಷವಾಗಲಿದೆ. 

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಾಗಿದ್ದ ಸಂವಿಧಾನದ ಆರ್ಟಿಕಲ್ 370 ರದ್ದತಿಗೆ ಆ.05 ಕ್ಕೆ ಒಂದು ವರ್ಷವಾಗಲಿದೆ. 

ಆ.05 ನ್ನು ಪಾಕಿಸ್ತಾನದ ಕೃಪಾಪೋಷಿತ ಪ್ರತ್ಯೇಕತಾವಾದಿಗಳು ಕರಾಳ ದಿನವನ್ನಾಗಿ ಆಚರಣೆ ಮಾಡಲಿದ್ದು, ಹಿಂಸಾಚಾರದ ಮೂಲಕ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿರುವುದರ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಆ.03 ರಿಂದ ಆ.05 ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಾಹಿದ್ ಇಕ್ಬಾಲ್ ಚೌಧರಿ, ಪಾಕ್ ಕೃಪಾಪೋಷಿತ ಪ್ರತ್ಯೇಕತಾವಾದಿಗಳು ಆ.05 ನ್ನು ಕರಾಳದಿನವನ್ನಾಗಿ ಆಚರಿಸಿ, ಹಿಂಸಾತ್ಮಕ ಪ್ರತಿಭಟನೆ ನಡೆಸುವುದನ್ನು ಯೋಜಿಸಲು ಸಂಚು ರೂಪಿಸಿರುವ ಬಗ್ಗೆ ಶ್ರೀನಗರ ಎಸ್ ಪಿಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!