ನಟ ಸುಶಾಂತ್ ಸಿಂಗ್ ಸಾವು ಪ್ರಕರಣ ಸಿಬಿಐಗೆ ಶಿಫಾರಸು; ಬಿಹಾರ ಸರ್ಕಾರದ ನಿರ್ಧಾರವನ್ನು ಒಪ್ಪಿದ್ದೇವೆ: ಸುಪ್ರೀಂಗೆ ಕೇಂದ್ರ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಿರುವ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿದ್ದೇವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಬುಧವಾರ ತಿಳಿಸಿದೆ.
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಿರುವ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿದ್ದೇವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ಬುಧವಾರ ತಿಳಿಸಿದೆ.
ಬಾಲಿವುಡ್ ನಟಿ ರಿಯಾ ಚಕ್ರವರ್ತಿಯವರು ಸುಶಾಂತ್ ಆತ್ಮಹತ್ಯೆ ಪ್ರಕರಣದ ಎಫ್ಐಆರ್'ನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಶಿಕೇಶ್ ರಾಯ್ ಅವರಿದ್ದ ನ್ಯಾಯಪೀಠ, ನಟನ ಸಾವಿನ ಹಿಂದಿರುವ ಸತ್ಯಾಸತ್ಯತೆ ಹೊರ ಬೀಳಬೀಳಬೇಕೆಂದು ತಿಳಿಸಿದೆ.
ಈ ನಡುವೆ ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಹಾಜರಿದ್ದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಅವರು, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.