ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ!
ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಅಯೋಧ್ಯೆ: ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ರಾಮಜನ್ಮಭೂಮಿ ಹಾಗೂ ಹನುಮಾನ್ ಗರ್ಹಿ ದೇವಾಲಯಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನೆರವೇರಿಸಲು ಅಯೋಧ್ಯೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೊದಲು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ನಂತರ ರಾಮ ಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.