ಆಸ್ಪತ್ರೆಯ ಆವರಣದಲ್ಲಿ ಕಂಡು ಬಂದ ದೃಶ್ಯ 
ದೇಶ

ಅಹಮದಾಬಾದ್ ಶ್ರೇಯ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಅಹಮದಾಬಾದ್: ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. 

ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು, ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ತನಿಖೆಗೆ ಸಿಎಂ ವಿಜಯ್ ರುಪಾನಿ ಆದೇಶ
ಈ ನಡುವೆ ದುರ್ಘಟನೆಗೆ ಸಂಬಂಧಿಸಿದಂತೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು ತನಿಖೆಗೆ ಆದೇಶಿಸಿದ್ದಾರೆ. 

ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಂಗೀತಾ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದು, ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಿಸಿದ ಸಿಎಂ ವಿಜಯ್ ರುಪಾನಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರೂ ಕೂಡ ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ವಿಜಯ್ ರುಪಾನಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT